ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಸಾನ್‌ ಸಮ್ಮಾನ್‌: ಪ್ರಧಾನಿ ಚಿತ್ರ ಕೈಬಿಟ್ಟಿದ್ದಕ್ಕೆ ಆಕ್ಷೇಪ

Last Updated 28 ಜೂನ್ 2019, 13:09 IST
ಅಕ್ಷರ ಗಾತ್ರ

ರಾಮನಗರ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಪ್ರಚಾರಕ್ಕಾಗಿ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳು ಕರಪತ್ರ ಮುದ್ರಿಸಿದ್ದು, ಅದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾವಚಿತ್ರವೇ ಇಲ್ಲದಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆ ಇದಾಗಿದ್ದು, ರೈತರಿಗೆ ವರ್ಷಕ್ಕೆ ₹6 ಸಾವಿರ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದೇ 30ರವರೆಗೆ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. ಯೋಜನೆಯ ಪ್ರಚಾರ ಮಾಡುವ ಸಲುವಾಗಿ ಕರಪತ್ರ, ಪೋಸ್ಟರ್‌ಗಳನ್ನು ಮುದ್ರಿಸಿ ಹಳ್ಳಿಗಳಲ್ಲಿ ಹಂಚಲಾಗುತ್ತಿದೆ.

ಈ ಕರಪತ್ರಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರ ಭಾವಚಿತ್ರಗಳಿವೆ. ಮತ್ತೊಂದು ಚಿತ್ರದಲ್ಲಿ ರಾಜ್ಯ ಕೃಷಿ ಸಚಿವ ಶಿವಶಂಕರರೆಡ್ಡಿ ಇದ್ದಾರೆ. ಆದರೆ ಪ್ರಧಾನಿಗಳ ಭಾವಚಿತ್ರವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ. ಈ ಮೂಲಕ ಅಧಿಕಾರಿಗಳು ಮಲತಾಯಿ ಧೋರಣೆ ತಾಳಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಆರೋಪವಾಗಿದೆ.

ಈ ಎಲ್ಲ ಕರಪತ್ರಗಳನ್ನು ಹಿಂಪಡೆದು ಪ್ರಧಾನಿಯವರ ಭಾವಚಿತ್ರ ಇರುವ ಕರಪತ್ರಗಳನ್ನು ಮುದ್ರಿಸಿ ಹಂಚಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT