ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ

Last Updated 17 ನವೆಂಬರ್ 2019, 13:02 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಕಾನ್‌ಸ್ಟೆಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ವಿವಿಧ ಶಾಲೆ, ಕಾಲೇಜುಗಳಲ್ಲಿ ಭಾನುವಾರ ನಡೆಯಿತು.

ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಬಿ.ಜಿ.ಎಸ್. ಪಿಯು ಕಾಲೇಜು, ಅರ್ಚಕರಹಳ್ಳಿಯ ಬೆತೆಲ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಐಜೂರಿನ ಭಾರತೀಯ ಸಂಸ್ಕೃತಿ ವಿದ್ಯಾಪೀಠ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ನ್ಯೂ ಎಕ್ಸ್‌ಪರ್ಟ್ ಪಿಯು ಕಾಲೇಜು, ಅರ್ಚಕರಹಳ್ಳಿಯ ಯೂನಿವರ್ಸಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆ, ರೈಲ್ವೆ ನಿಲ್ದಾಣದ ಬಳಿಯಿರುವ ಎಂ.ಎಂ.ಯು ಪ್ರಿ-ಯೂನಿವರ್ಸಿಟಿ, ವಾಟರ್ ಟ್ಯಾಂಕ್ ವೃತ್ತದ ಬಳಿ ಇರುವ ಸರ್ಕಾರಿ ಉರ್ದು ಪ್ರೌಢ ಶಾಲೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಿಡ್ಲ್ಯೂಡಿ ವೃತ್ತದ ಬಳಿ ಇರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಮದೇವರ ಬೆಟ್ಟದ ರಸ್ತೆಯ ಎಂ.ಎಂ.ಯು ಫಾರ್ಮಸಿ ಹಾಗೂ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪರೀಕ್ಷೆ ಏರ್ಪಡಿಸಲಾಗಿತ್ತು.

ಪರೀಕ್ಷೆ ನಡೆದ 12 ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರ ಅಳವಡಿಸಲಾಗಿತ್ತು. ಜತೆಗೆ ಗಾರ್ಡ್‌ಗಳು, ಅಧಿಕಾರಿ, ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಚನ್ನಪಟ್ಟಣದಲ್ಲಿನ ಪೊಲೀಸ್ ತರಬೇತಿ ಶಾಲೆಯಿಂದಲ್ಲೂ ಇನ್‌ಸ್ಪೆಕ್ಟರ್‌ಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಖಾಕಿ ಹಾಗು ಸಿಸಿ ಟಿವಿ ಕಣ್ಗಾವಲಿನಲ್ಲಿ ಖಾಕಿ ತೊಡಲಿರುವವರು ಪರೀಕ್ಷೆ ಬರೆದರು.

ಪರೀಕ್ಷೆ ಬರೆಯಲು ವಿಜಯಪುರ, ಬೆಳಗಾವಿ, ರಾಯಚೂರು ಹಾಗೂ ಉತ್ತರ ಕರ್ನಾಟಕದ ಮಂದಿಯೇ ಹೆಚ್ಚಾಗಿ ಬಂದಿದ್ದರು. ಶನಿವಾರ ರಾತ್ರಿಯೇ ಬಂದಿದ್ದ ಅಭ್ಯರ್ಥಿಗಳು ತಂಗಲು ಸ್ಥಳವಿಲ್ಲದೇ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಅಭ್ಯರ್ಥಿಗಳಿಂದಲೇ ಬಸ್ ನಿಲ್ದಾಣ ತುಂಬಿ ತುಳುಕುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT