ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾರಣದಲ್ಲಿ ದುರಹಂಕಾರಕ್ಕೆ ಉಳಿಗಾಲವಿಲ್ಲ

ಉಳಿಗಾಲವಿಲ್ಲ
Published 19 ಮಾರ್ಚ್ 2024, 5:12 IST
Last Updated 19 ಮಾರ್ಚ್ 2024, 5:12 IST
ಅಕ್ಷರ ಗಾತ್ರ

ಹಾರೋಹಳ್ಳಿ: ರಾಜಕಾರಣದಲ್ಲಿ ದುರಹಂಕಾರಕ್ಕೆ ಉಳಿಗಾಲವಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸೋಮವಾರ ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಈಗಾಗಲೇ ಹತಾಶೆ ಮನೋಭಾವ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಒಳಗಡೆ ಆತಂಕವಿದೆ. ಜನರನ್ನು ದಿಕ್ಕು ತಪ್ಪಿಸಿ ಮತ ಹಾಕಿಸಿಕೊಳ್ಳುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಟೀಕಿಸಿದರು.

ಈ ಭಾಗದ ಶಾಸಕರಿಗೆ ರಾಜಕೀಯ ಅನುಭವದ ಕೊರತೆ ಇದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ತಿರುಗೇಟು ನೀಡಿದರು.

ಮಂಡ್ಯ, ರಾಮನಗರದಲ್ಲಿ ಸೋತಾಗ ಸಹಜವಾಗಿ ನೋವು ಉಂಟಾಗಿತ್ತು. ಅದು ಸರ್ವೆ ಸಾಮಾನ್ಯ. ಎಲ್ಲವನ್ನೂ ನುಂಗಿಕೊಂಡು ರಾಜಕಾರಣ ಮಾಡಬೇಕಾಗಿದೆ ಎಂದರು.

ಡಾ.ಮಂಜುನಾಥ್ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಸಂಸ್ಥೆ ಬೆಳೆಸಿ ಜನ ಸೇವೆ ಮಾಡಿ ತೋರಿಸಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಮೈತ್ರಿ ಮಾಡಿಕೊಳ್ಳಲಾಗಿದೆ. ಅವರ ಗೆಲುವಿಗೆ ಶ್ರಮಿಸಬೇಕಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT