ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ

ಕಪ್ಪುಪಟ್ಟಿ ಧರಿಸಿ ಎಂದಿನಂತೆ ಕಾರ್ಯನಿರ್ವಹಿಸಿದ ಖಾಸಗಿ ಆಸ್ಪತ್ರೆ ವೈದ್ಯರು
Last Updated 8 ನವೆಂಬರ್ 2019, 17:30 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರಿನ ಮಿಂಟೊ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕರೆ ನೀಡಿದ್ದ ಹೊರ ರೋಗಿ ವಿಭಾಗ (ಒಪಿಡಿ) ಬಂದ್‌ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವೈದ್ಯರ ಮೇಲೆ ಹಲ್ಲೆ ಖಂಡಿಸಿ ಖಾಸಗಿ ಆಸ್ಪತ್ರೆಗಳ ಹೊರ ಹೋಗಿ ವಿಭಾಗವನ್ನು 24 ಗಂಟೆಗಳ ಕಾಲ ಮುಚ್ಚುವ ಮೂಲಕ ಮುಷ್ಕಾರ ನಡೆಸಲು ತೀರ್ಮಾನಿಸಿದ್ದರು. ಇವರ ನಿರ್ಧಾರಕ್ಕೆ ಇಲ್ಲಿನ ಖಾಸಗಿ ಆಸ್ಪತ್ರೆ ವೈದ್ಯರು ಬೆಂಬಸಲಿಸದೇ ಕಪ್ಪುಪಟ್ಟಿ ಧರಿಸಿ ಎಂದಿನಂತೆ ಕಾರ್ಯನಿರ್ವಹಿಸಿದರು.

ಸಾಮಾನ್ಯವಾಗಿ ಖಾಸಗಿ ಆಸ್ಪತ್ರೆಗಳ ಮುಷ್ಕರದ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಂದ ತುಂಬಿರಬೇಕಿತ್ತು. ಆದರೆ, ಶುಕ್ರವಾರ ನಡೆದ ಬಂದ್‌ನಲ್ಲಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಎಂದಿನಂತೆ ವೈದ್ಯರು ಕಾರ್ಯನಿರ್ವಹಿಸಿದರು. ಮಧ್ಯಾಹ್ನದ ವೇಳೆಗೆ ಜಿಲ್ಲಾ ಆಸ್ಪತ್ರೆ ಖಾಲಿ ಖಾಲಿಯಾಗಿತ್ತು.

ಸಾಮಾನ್ಯ ದಿನಗಳಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಸರಾಸರಿ 820 ಮಂದಿ ಹೊರ ರೋಗಿಗಳು ಬರುತ್ತಿದ್ದರು. ಇದರಲ್ಲಿ ತುರ್ತು ಸೌಲಭ್ಯ ಸೇರಿದಂತೆ ಇತರರು ಹಾಜರಾಗುತ್ತಿದ್ದರು. ಶುಕ್ರವಾರ ಮುಷ್ಕರದಿಂದ ಮಧ್ಯಾಹ್ನ 1 ಗಂಟೆಯ ವೇಳೆಗೆ ಹೊರ ರೋಗಿಗಳ ಆಗಮನವು 590 ದಾಟಿತ್ತು. ಖಾಸಗಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದರಿಂದ ಸಮಸ್ಯೆ ಉಂಟಾಗಲಿಲ್ಲ.

ಖಾಸಗಿ ವೈದ್ಯರ ಮುಷ್ಕರದ ಹಿನ್ನಲೆಯಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ತಡೆಯುವ ಸಲುವಾಗಿ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿತ್ತು. ಸಿಬ್ಬಂದಿಗೆ ವೈದ್ಯಕೀಯ ರಜೆ ಹೊರತು ಪಡಿಸಿ ಉಳಿದ ಎಲ್ಲ ರಜೆಗಳನ್ನು ಕಡಿತ ಮಾಡಲಾಗಿತ್ತು. ಜತೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸಿಬ್ಬಂದಿಗೆ ಇಲಾಖೆಯಿಂದ ಸ್ಪಷ್ಟ ಸೂಚನೆ ಕಳುಹಿಸಲಾಗಿತ್ತು. ಯಾವುದೇ ಕಾರಣ ನೀಡಿ ರಜೆ ತೆಗೆದುಕೊಳ್ಳದಂತೆ ಆದೇಶ ನೀಡಲಾಗಿತ್ತು. ವೈದ್ಯರು ಕೂಡ ರೋಗಿಗಳಿಗೆ ಅನಾನೂಕುಲ ಆಗುವುದನ್ನು ತಪ್ಪಿಸುವ ಸಲುವಾಗಿ ಎಂದಿಂತೆ ಕರ್ತವ್ಯಕ್ಕೆ ಹಾಜರಾಗಿದ್ದರು.

ಶುಕ್ರವಾರ ಸರ್ಕಾರಿ ಆಸ್ಪತ್ರೆಗಳಿಗೆ ಬಂದ ರೋಗಿಗಳ ಸಂಖ್ಯೆಯನ್ನು ರಾಜ್ಯ ಆರೋಗ್ಯ ಇಲಾಖೆಗೆ ಆಯಾ ಜಿಲ್ಲಾ ಶಸ್ತ್ರ ಚಿಕಿತ್ಸಕರು ಮಾಹಿತಿ ನೀಡಬೇಕೆಂಬ ಆದೇಶವಿದ್ದು, ದಿನದ ಕೊನೆಯದಾಗಿ ರೋಗಿಗಳ ಸಂಖ್ಯೆಯನ್ನು ಕಳುಹಿಸಿಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು.

ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT