ಗುರುವಾರ , ಅಕ್ಟೋಬರ್ 22, 2020
21 °C

ಆನ್‌ಲೈನ್‌ ಕ್ಲಾಸ್‌ ಮಧ್ಯೆ ಅಶ್ಲೀಲ ವಿಡಿಯೊ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಶಾಲೆಯೊಂದರ ಆನ್‌ಲೈನ್ ಪಾಠದ ಸಂದರ್ಭ ಅಶ್ಲೀಲ ವಿಡಿಯೊ ಪ್ರಸಾರ ಆಗಿದ್ದು, ಈ ಸಂಬಂಧ ರಾಮನಗರ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಚನ್ನಪಟ್ಟಣದ ಕೇಂಬ್ರಿಜ್‌ ಇಂಗ್ಲಿ‌ಷ್‌ ಮಾಧ್ಯಮ ಶಾಲೆಯು ತನ್ನ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್‌ ಮೂಲಕ ತರಗತಿ ನಡೆಸುತ್ತಿತ್ತು. ಸೋಮವಾರ ಆನ್‌ಲೈನ್‌ ಪಾಠದ ಮಧ್ಯೆ ಸುಮಾರು 30 ಸೆಕೆಂಡುಗಳ ಅಶ್ಲೀಲ ವಿಡಿಯೊ ಪ್ರಸಾರ ಆಯಿತು ಎನ್ನಲಾಗಿದೆ. ಈ ಕುರಿತು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಸೈಬರ್‌ ಪೊಲೀಸರಲ್ಲಿ ದೂರು ದಾಖಲಾಗಿದೆ.

"ಯಾರೋ ನಮ್ಮ ಶಾಲೆಯ ಆನ್‌ಲೈನ್ ಖಾತೆಯನ್ನು ಹ್ಯಾಕ್ ಮಾಡಿ ವಿಡಿಯೊ ಹರಿಬಿಟ್ಟಿದ್ದಾರೆ. ಇದಕ್ಕೂ ಶಾಲೆಗೂ ಸಂಬಂಧ ಇಲ್ಲ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಜರುಗಿಸಬೇಕು’ ಎಂದು ಶಾಲೆಯ ಕಾರ್ಯದರ್ಶಿ ಲಿಂಗೇಶ್‌ಕುಮಾರ್‍ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ಲೀಲ ವಿಡಿಯೊ ಪ್ರಸಾರವಾದ ಕುರಿತು ಸದ್ಯ ಪೊಲೀಸರಿಗೆ ಯಾವುದೇ ಸಾಕ್ಷ್ಯಗಳು ದೊರೆತಿಲ್ಲ. ಹೀಗಾಗಿ ಪ್ರಕರಣವನ್ನು ಸಿಐಡಿ ಪೊಲೀಸರಿಗೆ ಒಪ್ಪಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು