ಶನಿವಾರ, ಮಾರ್ಚ್ 25, 2023
22 °C

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ರಾಘವೇಂದ್ರ ರಾಜಕುಮಾರ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪುನೀತ್‌ ರಾಜಕುಮಾರ್ ಅಭಿಮಾನಿ ವೆಂಕಟೇಶ್‌ (25) ಮನೆಗೆ ನಟ ರಾಘವೇಂದ್ರ ರಾಜಕುಮಾರ್ ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪುನೀತ್‌ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೆಂಕಟೇಶ್‌ ಇದೇ 4ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದರು. ಅದನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವುಳ್ಳವರಿಗೆ ಕಸಿ ಮಾಡಲಾಗಿತ್ತು.

ವಿಷಯ ತಿಳಿದು ಭಾನುವಾರ ಎಲೆಕೇರಿಗೆ ಬಂದ ರಾಘವೇಂದ್ರ ರಾಜಕುಮಾರ್ ಅರ್ಧ ಗಂಟೆಗೂ ಹೆಚ್ಚು ಕಾಲ ವೆಂಕಟೇಶ್‌ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ನಿಮ್ಮ ಜೊತೆಗೆ ನಾವಿದ್ದೀವಿ, ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು