ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುದೂರು: ಬಂಡೇಮಠದಲ್ಲಿ ಪ್ರತಿಭಾ ಪುರಸ್ಕಾರ

Published 19 ಆಗಸ್ಟ್ 2024, 4:19 IST
Last Updated 19 ಆಗಸ್ಟ್ 2024, 4:19 IST
ಅಕ್ಷರ ಗಾತ್ರ

ಕುದೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೋಲೂರು ಹೋಬಳಿಯ ಕಂಚುಗಲ್ ಬಂಡೇಮಠದ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಉತ್ತಮ ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಇದೇ ವೇಳೆ ಬೆಂಗಳೂರಿನ ಮಾರುತಿ ಮೆಡಿಕಲ್ಸ್‌ನ ಮಹೇಂದ್ರ ಬನೋಟ್ ಜೈನ್ ಹಾಗೂ ವೆಂಕಟೇಶ್, ಪ್ರಹ್ಲಾದ್ ಬಾಬು, ರಾಜೇಂದ್ರ, ಎಬಿಎಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಡಿಕ್ಷನರಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಜ್ಞಾನ ಭಂಡಾರ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಡೇಮಠದ ಅಧ್ಯಕ್ಷ ಮಹಾಲಿಂಗ ಸ್ವಾಮೀಜಿ ಮಾತನಾಡಿ, ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಸಂಘ ಕಟ್ಟಿಕೊಂಡು ಶಾಲೆಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಸಂಘದಿಂದ ಮುಂದೆಯೂ ಶೈಕ್ಷಣಿಕ, ಸಾಮಾಜಿಕ ಹಾಗೂ ಶಾಲಾ ಅಭಿವೃದ್ಧಿ ಕಾರ್ಯಗಳು ಆಗಲಿ ಎಂದು ಹಾರೈಸಿದರು.

ಸಂಘದ ಕಾರ್ಯದರ್ಶಿ ದೇವರಾಜು ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಸಂಘದ ಗೌರವಾಧ್ಯಕ್ಷ ಹರೀಶ್ ಎಚ್.ಎಸ್, ಅಧ್ಯಕ್ಷ ಸುನಿಲ್ ಕುಮಾರ್ ಎಂ, ಕಾರ್ಯದರ್ಶಿಗಳಾದ ಮಂಜು ಆರಾಧ್ಯ, ಸುಂದರ್ ಮೂರ್ತಿ, ಸುಮಲತಾ, ಖಜಾಂಚಿ ಸೌಮ್ಯಶ್ರೀ ಯೋಗೇಶ್, ಸದಸ್ಯರಾದ ಶಶಿಕಲಾ, ಮಲ್ಲಿಕಾರ್ಜುನ್, ನಂದೀಶ್, ಶಿಲ್ಪಾ, ಜ್ಯೋತಿ, ರಾಜಕುಮಾರ್, ಶ್ರೀನಿವಾಸ್, ಸುಮಂತ್, ಚಂದ್ರಶೇಖರ್ ಹಾಗೂ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

ಸೋಲೂರು ಹೋಬಳಿಯ ಕಂಚುಗಲ್ ಬಂಡೇಮಠದ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಸೋಲೂರು ಹೋಬಳಿಯ ಕಂಚುಗಲ್ ಬಂಡೇಮಠದ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT