ರಾಮನಗರ: ಕನಕಪುರದ ಮಾತೆ ಸಾವಿತ್ರಿ ಬಾಫುಲೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗದ ಶಿವಶರಣ ಮಾದಾರ ಗುರುಪೀಠದ ಪೀಠಾಧ್ಯಕ್ಷ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಜುಲೈ 27ರಂದು ರಾಮನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಟ್ರಸ್ಟ್ನಿಂದ ಪ್ರತಿಭಾ ಪುರಸ್ಕಾರ ಸಹ ಹಮ್ಮಿಕೊಳ್ಳಲಾಗಿದೆ. ಹಾಗಾಗಿ, 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಬಡ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳು ಜುಲೈ 10ರೊಳಗೆ ತಮ್ಮ ಸ್ವವಿವರದೊಂದಿಗೆ (ಬಯೋಡಾಟ) ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರದ ನಕಲು ಪ್ರತಿಗಳೊಂದಿಗೆ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ವಿಳಾಸ: ಮಿತ್ರ ಆಫ್ಸೆಟ್ ಪ್ರಿಂಟರ್ಸ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ, ಮಂಜುನಾಥ ರೈಸ್ ಮಿಲ್ ಹತ್ತಿರ, ಕನಕಪುರ ಟೌನ್- 562117.

ಮಾಹಿತಿಗೆ ಸಂಪರ್ಕ ಸಂಖ್ಯೆ: 9008912628, 9611446653, 9845212650 ಸಂಪರ್ಕಿಸಬಹುದು ಎಂದು ಟ್ರಸ್ಟ್ ಅಧ್ಯಕ್ಷ ಎಂ. ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.