ಶುಕ್ರವಾರ, ಸೆಪ್ಟೆಂಬರ್ 20, 2019
22 °C

ಕುಡಿಯುವ ನೀರು ಪೂರೈಕೆಗೆ ಆದ್ಯತೆ

Published:
Updated:
Prajavani

ಮಾಗಡಿ: ‘ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 13ನೇ ಹಣಕಾಸು ಯೋಜನೆಯಡಿ ಕೊಳವೆಬಾವಿ ಕೊರೆಸಿ ನೀರು ಸರಬರಾಜು ಮಾಡಲಾಗುವುದು’ ಎಂದು ಜೆಡಿಎಸ್‌ ಮುಖಂಡ ಎಂ.ಎನ್‌.ಮಂಜುನಾಥ ತಿಳಿಸಿದರು.

ಪಟ್ಟಣದ ಜ್ಯೋತಿನಗರದಲ್ಲಿ ಕೊಳವೆಬಾವಿ ಕೊರೆಯಲು ಚಾಲನೆ ನೀಡಿ ಅವರು ಮಾತನಾಡಿದರು. ‘ಬರ ಪರಿಹಾರ ಯೋಜನೆಯಡಿ ಕೊಳವೆಬಾವಿ ಕೊರೆಸಲು ಸರ್ಕಾರ ಅನುಮತಿ ನೀಡಿದೆ. ಮಂಚನಬೆಲೆ ಜಲಾಶಯದಿಂದಲೂ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಾದಾಗ ಕೊಳವೆಬಾವಿ ನೀರನ್ನು ಮನೆಗಳಿಗೆ ಪೂರೈಕೆ ಮಾಡಲಾಗುವುದು’ ಎಂದರು.

ವಾರ್ಡ್‌ನ ನಿವಾಸಿಗಳಾದ ರಾಜಣ್ಣ, ರಮೇಶ್, ಲವ, ಶ್ರೀಕಾಂತ್, ಚಂದ್ರಪ್ಪ ಇದ್ದರು.

Post Comments (+)