ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರ ಸಚಿವ ಕುಮಾರಸ್ವಾಮಿ ಸ್ವಾಗತಕ್ಕೆ ಅದ್ದೂರಿ ತಯಾರಿ

Published 13 ಜೂನ್ 2024, 16:34 IST
Last Updated 13 ಜೂನ್ 2024, 16:34 IST
ಅಕ್ಷರ ಗಾತ್ರ

ದೇವನಹಳ್ಳಿ: ಎನ್‌ಡಿಎ ಸರ್ಕಾರದ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಶುಕ್ರವಾರ ಬೆಳಗ್ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭರ್ಜರಿ ಸ್ವಾಗತ ಕಾರ್ಯಕ್ರಮಕ್ಕೆ ಜೆಡಿಎಸ್‌ ಮುಂದಾಗಿದೆ.

ತಾಲ್ಲೂಕಿನ ಸಾದಹಳ್ಳಿ ಟೋಲ್‌ ಬಳಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಸೇರುವ ನಿರೀಕ್ಷೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗುವುದು.

ವಿಮಾನ ನಿಲ್ದಾಣದಿಂದ ಟೋಲ್‌ ಪ್ಲಾಜಾದ ಬಳಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಆಗಮಿಸಲಿದ್ದು, ಅಲ್ಲಿಂದ ತೆರೆದ ವಾಹನದ ಮೂಲಕ ಮೆರವಣಿಗೆಯಲ್ಲಿ ಸಾಗಲು ವ್ಯವಸ್ಥೆ ಮಾಡಲಾಗಿದೆ.

ಅವರನ್ನು ಸ್ವಾಗತಿಸಲು ಬೃಹತ್‌ ಸೇಬಿನ ಹಾರ ಸೇರಿದಂತೆ ಕರ್ನಾಟಕದ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ಮೆರವಣಿಗೆಗೆ ಮೆರಗು ನೀಡಲಿವೆ.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT