ರಾಮನಗರ: ‘ಜಿಲ್ಲಾಡಳಿತದ ವತಿಯಿಂದ ಏ. 14ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ನಡೆಯಲಿರುವ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಆನೆ ಅಂಬಾರಿಯಲ್ಲಿ ಮೆರವಣಿಗೆ ಮಾಡಲಾಗುವುದು’ ಎಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿಯ ಶಿವಶಂಕರ್ ಹೇಳಿದರು.

‘ನಗರದ ಮಿನಿ ವಿಧಾನಸೌಧದಿಂದ ಜೂನಿಯರ್ ಕಾಲೇಜು ಮೈದಾನದವರೆಗೆ ಬೆಳ್ಳಿ ಅಂಬಾರಿ ಮೇಲೆ ನಡೆಯುವ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತ 500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಳ್ಳಲಿದ್ದಾರೆ. 30ಕ್ಕೂ ಹೆಚ್ಚು ಜನಪದ ಕಲಾ ತಂಡಗಳು ಭಾಗವಹಿಸಲಿವೆ’ ಎಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ದಲಿತಪರ ಸಂಘಟನೆಗಳು, ಪ್ರಗತಿಪರರು, ನಿವೃತ್ತ ನೌಕರರು, ಹಿಂದುಳಿದ ವರ್ಗದವರು, ಸೇರಿದಂತೆ ಎಲ್ಲಾ ಸಮುದಾಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ರೂಪಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು’ ಎಂದು ಹೇಳಿದರು.

ಮುಖಂಡ ಜಯಚಂದ್ರ, ‘ಜಿಲ್ಲಾಮಟ್ಟದ ಈ ಕಾರ್ಯಕ್ರಮದ ಯಶಸ್ವಿಗಾಗಿ ಗ್ರಾಮಮಟ್ಟದಲ್ಲಿ ಪ್ರಚಾರ ನಡೆಸಲಾಗುತ್ತಿದೆ. ಸ್ವಸಹಾಯ ಸಂಘಗಳ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವುದಕ್ಕಾಗಿ ನಾವೆಲ್ಲರೂ ಒಗ್ಗೂಡಿದ್ದೇವೆ’ ಎಂದರು.

ಮುಖಂಡ ಕೋಟೆ ಕುಮಾರ್, ‘ಅಂಬೇಡ್ಕರ್ ಜಯಂತಿಯನ್ನು ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಆಚರಿಸಲಾಗುತ್ತಿದೆ. ಜಿಲ್ಲಾಧಿಕಾರಿ ವಿರುದ್ಧದ ಸಂಘಟನೆಗಳ ಅಸಮಾಧಾನವು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕಾರ್ಯಕ್ರಮ ಮುಗಿದ ಬಳಿಕ ಜಿಲ್ಲಾಧಿಕಾರಿ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ತಿಳಿಸಿದರು.

ಮುಖಂಡ ಗುಡ್ಡೆ ವೆಂಕಟೇಶ್, ‘ರಾಮನಗರ ನಗರಸಭೆಯೂ ಕಾರ್ಯಕ್ರಮಕ್ಕೆ ಕೈ ಜೋಡಿಸಿದ್ದು, ಅಂಬೇಡ್ಕರ್ ಜಯಂತಿ ಆಚರಣೆಗೆ ಮೀಸಲಿಟ್ಟಿರುವ ₹5 ಲಕ್ಷವನ್ನು ಕಾರ್ಯಕ್ರಮ ನೀಡಲಿದೆ. ಶಾಸಕ ಹುಸೇನ್ ಅವರ ನೇತೃತ್ವದಲ್ಲಿ ಜಿ.ಪಂ. ಸಭಾಂಗಣದಲ್ಲಿ ನಡೆದಿದ್ದ ಪೂರ್ವಭಾವಿ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅವರು ಈ ಕುರಿತು ಭರವಸೆ ನೀಡಿದ್ದಾರೆ’ ಎಂದರು.

ಮುಖಂಡರಾದ ಚಲುವರಾಜು, ಎಸ್. ವೆಂಕಟೇಶ್, ಶಿವಲಿಂಗಯ್ಯ, ಗೋಪಿ, ನವೀನ್ ಕುಮಾರ್, ಶ್ರೀನಿವಾಸ್, ಶಿವಲಿಂಗಯ್ಯ, ಪ್ರತಾಪ್, ಬೋರಯ್ಯ, ಅನಿಲ್ ಜೋಗಿಂದರ್, ಬಿವಿಎಸ್ ವೆಂಕಟೇಶ್ ಹಾಗೂ ಇತರರು ಇದ್ದರು.

Quote - ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳ ಒಕ್ಕೂಟದಿಂದ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಸ್ವಾಭಿಮಾನ ಭೀಮೋತ್ಸವ ಕಾರ್ಯಕ್ರಮ ಜರುಗಲಿದೆ. ಜಿಲ್ಲಾಧಿಕಾರಿ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಶಿವಕುಮಾರ ಸ್ವಾಮಿ ಸಂಚಾಲಕ ದಲಿತ ಸಂಘಟನೆಗಳ ಒಕ್ಕೂಟ

‘ಶಾಸಕರಿಗೆ ಗೌರವ ಕೊಟ್ಟು ಬೆಂಬಲ’

‘ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಜನ್ಮ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ಜಿಲ್ಲಾಧಿಕಾರಿ ಗೈರಾಗಿದ್ದನ್ನು ಖಂಡಿಸಿ ನಾವು ಸಭೆ ಬಹಿಷ್ಕರಿಸಿ ಪ್ರತಿಭಟಿಸಿದ್ದೆವು. ವಿಷಯ ತಿಳಿದ ಶಾಸಕರು ದಲಿತ ಸಂಘಟನೆಗಳ ಮುಖಂಡರನ್ನು ಕರೆದು ಮಾತನಾಡಿದರು. ಜಿ.ಪಂ. ಸಭಾಂಗಣದಲ್ಲಿ ಮುಖಂಡರೊಂದಿಗೆ ಮತ್ತೆ ಪೂರ್ವಭಾವಿ ಸಭೆ ನಡೆಸಿ ಅಂಬೇಡ್ಕರ್ ಜಯಂತಿ ಆಚರಣೆಯ ನೇತೃತ್ವ ವಹಿಸಿಕೊಂಡರು. ಜಿಲ್ಲಾಧಿಕಾರಿ ಮೇಲಿನ ಸಿಟ್ಟು ಕಾರ್ಯಕ್ರಮಕ್ಕೆ ಅಡ್ಡಿಯಾಗಬಾರದೆಂದು ಶಾಸಕರ ಮಾತಿಗೆ ಗೌರವ ಕೊಟ್ಟು ಕಾರ್ಯಕ್ರಮಕ್ಕೆ ಕೈ ಜೋಡಿಸಿದ್ದೇವೆ. ಕೆಲ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ನಡೆದಿದೆ’ ಎಂದು ಪ್ರಶ್ನೆಯೊಂದಕ್ಕೆ ಶಿವಶಂಕರ್ ಪ್ರತಿಕ್ರಿಯಿಸಿದರು. ಇತ್ತೀಚೆಗೆ ನಡೆದ ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮದಲ್ಲಿ ಕೆಲ ಮುಖಂಡರ ದ್ವಿಪಾತ್ರ ಕುರಿತ ಪ್ರಶ್ನೆಗೆ ‘ಸಮುದಾಯದ ನಾಯಕನಿಗೆ ಗೌರವ ಸೂಚಿಸುವ ಸಲುವಾಗಿ ಎರಡೂ ಕಡೆ ನಡೆದ ಕಾರ್ಯಕ್ರಮದಲ್ಲಿ ಕೆಲ ಮುಖಂಡರು ಪಾಲ್ಗೊಂಡಿದ್ದರು. ಬಾಬೂಜಿ ಕಾರ್ಯಕ್ರಮದಂತೆ ಅಂಬೇಡ್ಕರ್ ಜಯಂತಿಯೂ ಆಗಬಾರದೆಂಬ ಕಾರಣಕ್ಕೆ ನಾವೆಲ್ಲರೂ ಜಿಲ್ಲಾಡಳಿತದ ಕಾರ್ಯಕ್ರಮ ಬೆಂಬಲಿಸುತ್ತಿದ್ದೇವೆ. ಕಾರ್ಯಕ್ರಮ ಮುಗಿದ ಬಳಿಕ ಡಿ.ಸಿ ಜೊತೆಗೆ ಸಂಘಟನೆಗಳ ಮುಖಂಡರೊಂದಿಗೆ ಸಭೆ ಏರ್ಪಡಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.