ಪ್ರಜಾವಾಣಿ ವಾರ್ತೆ

ರಾಮನಗರ: ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸ್ಮಾರ್ಟ್ ಮೀಟರ್ ಯೋಜನೆಯು ಗ್ರಾಹಕರ ವಿರೋಧಿಯಾಗಿದೆ. ಜನರ ಜೇಬಿಗೆ ಕತ್ತರಿ ಹಾಕಿ, ಕೋಟ್ಯಂತರ ರೂಪಾಯಿ ಸುಲಿಗೆ ಮಾಡುವ ಈ ಯೋಜನೆಯನ್ನು ಸರ್ಕಾರ ಕೂಡಲೇ ಕೈ ಬಿಡಬೇಕು’ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ. ವೆಂಕಟೇಶ್ ಆಗ್ರಹಿಸಿದರು.

‘ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ವಿಫಲವಾಗಿರುವ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಇದೀಗ ದುಬಾರಿ ಹಾಗೂ ಅನಗತ್ಯವಾದ ಸ್ಮಾರ್ಟ್ ಮೀಟರ್ ಖರೀದಿ ಕಡ್ಡಾಯಗೊಳಿಸುವ ಯೋಜನೆ ರೂಪಿಸಿದೆ. ಈ ಬಗ್ಗೆ ವ್ಯಾಪಕ ವಿರೋಧ ಮತ್ತು ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಅಥವಾ ಎಸ್ಕಾಂಗಳು ಕ್ಯಾರೇ ಎನ್ನುತ್ತಿಲ್ಲ’ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ವಿದ್ಯುತ್ ವಿತರಣೆಯನ್ನು ಪರಿಣಾಮಕಾರಿಯಾಗಿಸಲು ಕೇಂದ್ರ ಸರ್ಕಾರ ಆರ್ಡಿಡಿಎಸ್ (ಪರಿಷ್ಕೃತ ವಿತರಣಾ ವಲಯ ಯೋಜನೆ) ಯೋಜನೆ ಜಾರಿಗೆ ತಂದು ರಾಜ್ಯ ಸರ್ಕಾರಗಳಿಗೆ ಹಣಕಾಸಿನ ನೆರವು ಘೋಷಿಸಿತ್ತು. ಅನೇಕ ರಾಜ್ಯಗಳು ಇದರ ಉಪಯೋಗ ಪಡೆದುಕೊಂಡಿವೆ. ಆದರೆ, ಕರ್ನಾಟಕ ಮಾತ್ರ ಇನ್ನೂ ಪಡೆದುಕೊಂಡಿಲ್ಲ’ ಎಂದು ಹೇಳಿದರು.

‘ಎಸ್ಕಾಂಗಳ ಉದ್ದಾರಕ್ಕಾಗಿ ಸ್ಮಾರ್ಟ್ ಮೀಟರ್ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಸರ್ಕಾರ ಬಿಂಬಿಸಲು ಮುಂದಾಗಿದೆ. ಯೋಜನೆ ರೂಪಿಸುವಾಗ ಸಿಇಎ ಮತ್ತು ಕೆಇಆರ್ಸಿ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದೆ. ಈ ಅವಸರದ ನಿರ್ಧಾರದ ಹಿಂದೆ ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಅಧಿಕಾರಸ್ಥರ ತಿಜೋರಿ ತುಂಬಿಸುವ ಹುನ್ನಾರವಿದೆ. ಈ ಯೋಜನೆ ಅವೈಜ್ಞಾನಿಕದ ಜೊತೆಗೆ ಅಪ್ರಯೋಜಕವಾಗಿದೆ’ ಎಂದು ಟೀಕಿಸಿದರು.

‘ಕೆಇಅರ್ಸಿ ನಿಯಮದ ಪ್ರಕಾರ, ಸರ್ಕಾರ ಅಥವಾ ಎಸ್ಕಾಂಗಳು ಹೊಸ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸುವಂತಿಲ್ಲ. ಇದು ನ್ಯಾಯಾಲಯ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ. ಮುಂಬರುವ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಬೇಕು ಎಂದು ಫೆ. 15ರಂದು ಬೆಸ್ಕಾಂ ಹೊರಡಿಸಿದ್ದ ಆದೇಶದ ವಿರುದ್ಧ ಸಂಘ ಈಗಾಗಲೇ ಪ್ರತಿಭಟನೆ ನಡೆಸಿದೆ. ಆದೇಶವನ್ನು ಬೆಸ್ಕಾಂ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಬಿ. ಗೋಪಾಲ್ ಮಾತನಾಡಿ, ‘ರಾಜ್ಯ ಸರ್ಕಾರ ರೈತ ವಿರೋಧಿಯಾಗಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ನೆಪದಲ್ಲಿ ಜನರನ್ನು ಸುಲಿಗೆ ಮಾಡಲು ಮುಂದಾಗಿದೆ. ಬಿಡದಿಯಲ್ಲಿ ಟೌನ್ಶಿಪ್ ನಿರ್ಮಾಣ ಯೋಜನೆಗೆ ಅಗತ್ಯವಿರುವ ಭೂ ಸ್ವಾಧೀನಕ್ಕೆ ಸ್ಥಳೀಯರ ವಿರೋಧವಿದ್ದರೂ, ಯೋಜನೆ ಜಾರಿಗೆ ಮುಂದಾಗಿದೆ. ಇದರ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಗೋಪಾಲ್, ಕಾರ್ಯದರ್ಶಿ ಪುಟ್ಟರಾಜು, ಪದಾಧಿಕಾರಿಗಳಾದ ಶ್ರೀಧರ್, ಕುಮಾರ್, ರಂಗಸ್ವಾಮಿ, ಬಸವರಾಜು, ಶ್ರೀನಿವಾಸ್, ಸಂತೋಷ, ಉಮೇಶ್, ಮಾರಣ್ಣ ಹಾಗೂ ಇತರರು ಇದ್ದರು.

Highlights - ವಿದ್ಯುತ್ ಗ್ರಾಹಕರನ್ನು ಸುಲಿಗೆ ಮಾಡುವ ಯೋಜನೆ ಮೀಟರ್ ಅಳವಡಿಕೆ ಆದೇಶ ಹಿಂಪಡೆಯಲು ಆಗ್ರಹ ಆರ್ಡಿಡಿಎಸ್ ಯೋಜನೆಯ ನೆರವು ಪಡೆಯದ ರಾಜ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.