ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಖಾಸಗಿ ಶಾಲೆಗಳ ವ್ಯಾಮೋಹ ಸಲ್ಲ: ಡಾ. ಮುತ್ತುರಾಜು

Published 13 ಫೆಬ್ರುವರಿ 2024, 4:18 IST
Last Updated 13 ಫೆಬ್ರುವರಿ 2024, 4:18 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಸಿಲುಕದೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಅಕ್ಕೂರು ಹೊಸಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮುತ್ತುರಾಜು ಕಿವಿಮಾತು ಹೇಳಿದರು.

ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಬಿಸಿಲಮ್ಮದೇವಿಯ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗುಣಾತ್ಮಕ ಶಿಕ್ಷಣವನ್ನು ನೀಡುವಲ್ಲಿ ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಪೋಷಕರು ಕೇವಲ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಸರ್ಕಾರಿ ಶಾಲೆಗಳನ್ನು ಮರೆಯುತ್ತಿದ್ದಾರೆ ಎಂದು ವಿಷಾದಿಸಿದರು.

ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿ, ಮಕ್ಕಳಿಗೆ ಉತ್ತಮ ಆಚಾರ, ವಿಚಾರ ಮತ್ತು ಸಂಸ್ಕೃತಿ ಕಲಿಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದರು.

ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ದಾಸೇಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಮಲ್ಲೇಶಯ್ಯ, ಗ್ರಾ.ಪಂ. ಸದಸ್ಯರಾದ ಮುತ್ತುರಾಜು, ಶಿವಮ್ಮ, ಗೋಪಿ, ಗುರುಮೂರ್ತಿ, ಸಮೂಹ ಸಂಪನ್ಮೂಲ ವ್ಯಕ್ತಿ ಮಹದೇವಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅರಳಾಪುರ ಬಸವರಾಜು, ಕಾರ್ಯದರ್ಶಿ ಮಹದೇವ, ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಎಂ. ನಾಗೇಶ್, ನಿರ್ದೇಶಕರಾದ ರಾಮಕೃಷ್ಣೇಗೌಡ, ಲಿಂಗರಾಜು, ಸಾಕಮ್ಮ, ಎನ್.ಪಿ.ಎಸ್. ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ, ತಾಲ್ಲೂಕು ಅಧ್ಯಕ್ಷ ಎನ್.ಟಿ. ಶೇಖರ್, ಮುಖಂಡರಾದ ಸಿದ್ದಪ್ಪ, ಕೆ.ಎಸ್. ನಾಗರಾಜು, ಸಿದ್ದರಾಜು, ಮುಖ್ಯ ಶಿಕ್ಷಕಿ ಕಾಂತಮ್ಮ, ಶಿಕ್ಷಕರು ಭಾಗವಹಿಸಿದ್ದರು.

ಶಾಲಾ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT