ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಪರ ಘೋಷಣೆ ಸುಳ್ಳು: ಎಫ್ಎಸ್ಎಲ್ ವರದಿ

Published 22 ಏಪ್ರಿಲ್ 2024, 22:37 IST
Last Updated 22 ಏಪ್ರಿಲ್ 2024, 22:37 IST
ಅಕ್ಷರ ಗಾತ್ರ

ಕುದೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ಪ್ರಚಾರದ ಸಂದರ್ಭದಲ್ಲಿ  ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಎಫ್‌ಎಸ್‌ಎಲ್ ವರದಿ ಬಂದಿದ್ದು, ದೇಶ ವಿರೋಧಿ ಘೋಷಣೆ ಕೂಗಿಲ್ಲ ಎಂದು ವರದಿ ಹೇಳಿದೆ. 

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಗ್ರಾಮದಲ್ಲಿ ಏ. 19ರಂದು ಈ ಘಟನೆ ನಡೆದಿತ್ತು. ‘ಬಾಲಕೃಷ್ಣ ಕೀ ಜೈ’ ಎಂದು ಕೂಗಿದ್ದ ಘೋಷಣೆಯನ್ನು ‘ಪಾಕಿಸ್ತಾನ್‌ ಕೀ ಜೈ’ ಎಂದು ತಿರುಚಿ, ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ರಾಮಚಂದ್ರಯ್ಯ ಎಂಬುವರು ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೊತೆಗೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಸಹ ಘೋಷಣೆ ಕುರಿತು ಠಾಣೆಗೆ ದೂರು ಕೊಟ್ಟಿತ್ತು.

‘ದೇಶ ವಿರೋಧಿ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಸಂಜೆ ಎಫ್ಎಸ್ಎಲ್ ವರದಿ ಬಂದಿದ್ದು, ಅದರಲ್ಲಿ ರಾಮಚಂದ್ರಯ್ಯ ಎಂಬ ಕಾಂಗ್ರೆಸ್ ಕಾರ್ಯಕರ್ತ ‘ಬಾಲಕೃಷ್ಣ ಕೀ ಜೈ’ ಎಂದು ಕೂಗಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT