ಶುಕ್ರವಾರ, ಮೇ 14, 2021
32 °C

ಜೆಡಿಎಸ್ ಮುಖಂಡರ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ‘ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಮನಗರ ಶಾಸಕರಾಗಿದ್ದ ವೇಳೆ ಎಲ್ಲ ವಾರ್ಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಇದನ್ನು ಬೆಂಬಲಿಸಿ ಈ ಬಾರಿ ನಗರಸಭೆಯಲ್ಲಿ ಮತದಾರರು ಪಕ್ಷದ ಕೈ ಹಿಡಿಯಲಿದ್ದಾರೆ’ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

27ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ಕಲಾ ಚಂದ್ರಯ್ಯ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಆಗುತ್ತಿಲ್ಲ. ಆದರೆ, ಅವರು ಮತ್ತು ಶಾಸಕರಾದ ಅನಿತಾ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.

ಸರ್ಕಾರ ಕೊರೊನಾ ನಿಯಂತ್ರಣ ಮಾರ್ಗಸೂಚಿ ಅನುಸರಿಸಿ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಮನೆ ಮನೆಗೆ ತೆರಳಿ ಕರಪತ್ರ ನೀಡುವ ಮೂಲಕ ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದಾರೆ. ಮತದಾರರು ತಮ್ಮ ವಾರ್ಡು ಸೇರಿದಂತೆ ನಗರದ ಒಟ್ಟಾರೆ ಅಭಿವೃದ್ದಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಮುಖಂಡರಾದ ಬಿಳಗುಂಬ ವಾಸು, ವೆಂಕಟೇಶ್, ಕೆ. ಚಂದ್ರಯ್ಯ, ಕುಮಾರ್, ಬೈರಪ್ಪ, ಪ್ರಸನ್ನ, ಕ್ಯಾಸಾಪುರ ರವಿ, ಮಾವಿನಸಸಿ ವೆಂಕಟೇಶ್, ಸುಗ್ಗನಹಳ್ಳಿ ರಾಮಕೃಷ್ಣಯ್ಯ, ಜಗ್ಗೇಶ್, ಜೆ. ಮುಕುಂದರಾಜು ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು