ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ಶಾಲೆಯಲ್ಲಿ ಕ್ರೀಡೆಗೆ ಉತ್ತೇಜನ’

ಕೈಲಾಂಚ ಹೋಬಳಿ ಮಟ್ಟದ ಶಾಲಾ ಕ್ರೀಡಾಕೂಟ
Last Updated 31 ಜುಲೈ 2022, 5:34 IST
ಅಕ್ಷರ ಗಾತ್ರ

ರಾಮನಗರ: ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಕ್ರೀಡೆಗಳಿಗೂ ಉತ್ತೇಜನ ದೊರೆಯುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಜಿ. ಕುಮಾರಸ್ವಾಮಿ ತಿಳಿಸಿದರು.

ಕೈಲಾಂಚ ಹೋಬಳಿಯ ಅವ್ವೇರಹಳ್ಳಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೈಲಾಂಚ ಹೋಬಳಿ ಮಟ್ಟದ ಕ್ರೀಡಾಕೂಟದ ಸಮಾರೋಪದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು ಮಕ್ಕಳು ಒಂದಿಲ್ಲೊಂದು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು.

ಕೈಲಾಂಚ, ವಿಭೂತಿಕೆರೆ, ಹುಣಸನಹಳ್ಳಿ, ಅವ್ವೇರಹಳ್ಳಿ ಕ್ಲಸ್ಟರ್‌ನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಪ್ರಾಥಮಿಕ ಶಾಲಾ ಮಕ್ಕಳಿಗೆ 100, 200, 400, 600 ಮೀಟರ್ ಓಟ, ಡಿಸ್ಕಸ್‌ ಥ್ರೋ, ಶಾಟ್‌ಪಟ್‌, ಉದ್ದ ಜಿಗಿತ, ಎತ್ತರ ಜಿಗಿತ, ಕಬಡ್ಡಿ, ಕೊಕ್ಕೊ, ರಿಲೇ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಅಥ್ಲೆಟಿಕ್ಸ್‌ ಜೊತೆಗೆ ಕೊಕ್ಕೊ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್‌, ಷಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆ ನಡೆದವು.

ಹುಲಿಕೆರೆ ಗುನ್ನೂರು ಗ್ರಾ.ಪಂ. ಅಧ್ಯಕ್ಷೆ ತೇಜಾ ಸತೀಶ್, ರಾಮನಗರ ತಾಲ್ಲೂಕು ದೈಹಿಕ ಪರಿವೀಕ್ಷಕ ಶ್ರೀನಿವಾಸ್, ಪ್ರಾಂಶುಪಾಲ ನಾಮಧಾರ್ ನರಸಿಂಹಲು ಮಾತನಾಡಿದರು.

ಗ್ರಾ.ಪಂ. ಸದಸ್ಯರಾದ ನಾಗೇಶ್, ಚಿಕ್ಕತಾಯಮ್ಮ, ವಿಎಸ್‍ಎಸ್‍ಎನ್ ಅಧ್ಯಕ್ಷ ವೆಂಕಟಪ್ಪ, ಉಪ ಪ್ರಾಂಶುಪಾಲೆ ಕೆ.ವಿ. ಪುಷ್ಪಲತಾ, ಹೊಂಬೆಳಕು ಸಂಸ್ಥೆಯ ಅಧ್ಯಕ್ಷ ಉಮೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರೇಣುಕಯ್ಯ, ಮುಖಂಡರಾದ ಪೊಲೀಸ್ ಸುರೇಶ್, ತಮ್ಮಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT