ರಾಮನಗರ: ಇಲ್ಲಿನ ರಾಮದೇವರ ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ್ದಾರೆ.
ಬೆಂಗಳೂರಿನ ಆರ್.ಎನ್. ಶೆಟ್ಟಿ ಕಾಲೇಜಿನ ಪ್ರಥಮ ಬಿ.ಇ. ವಿದ್ಯಾರ್ಥಿ ಚೇತನ್ (19) ಹಾಗೂ ಅದೇ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಸಾಹಿತ್ಯ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಳಿಗ್ಗೆ 11.30ರ ಸುಮಾರಿಗೆ ಬೆಟ್ಟದ ಮೇಲಿಂದ ಜಿಗಿದು ಬಂಡೆಗಳ ಮಧ್ಯೆ ಸಿಲುಕಿ ಗಾಯಗೊಂಡಿದ್ದ ಅವರನ್ನು ಗ್ರಾಮೀಣ ಠಾಣೆ ಇನ್‌ಸ್ಪೆಕ್ಟರ್ ಗಿರಿರಾಜ್ ಮತ್ತು ಸಿಬ್ಬಂದಿ ಸುಮಾರು 3 ಗಂಟೆ ಕಾಲ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದರು.
ಗಾಯಾಳುಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.