ವಿದ್ಯುತ್‌ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

ಗುರುವಾರ , ಜೂನ್ 20, 2019
27 °C
ಜಯ ಕರ್ನಾಟಕ ಸಂಘಟನೆಯಿಂದ ಬೆಸ್ಕಾಂಗೆ ಮನವಿ

ವಿದ್ಯುತ್‌ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

Published:
Updated:
Prajavani

ರಾಮನಗರ: ಪ್ರತಿ ಯೂನಿಟ್‍ ಗೆ 33 ಪೈಸೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಇಲ್ಲಿನ ಬೆಸ್ಕಾಂ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ರಾಜ್ಯದ ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ವಿದ್ಯುತ್ ದರವನ್ನು ಪ್ರತಿ ಯೂನಿಟ್‍ ಗೆ 33 ಪೈಸೆ ಹೆಚ್ಚಳ ಮಾಡಿರುವುದು ಗಾಯದ ಮೇಲೆ ಬರೆ ಎಳೆಯುವ ಕೆಲಸವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿಯೇ ಇಂಧನ ಖಾತೆ ಇದ್ದು, ಕೆಇಆರ್ ಸಿ ನೌಕರರ ವೇತನ ಪರಿಷ್ಕರಣೆ ಮಾಡುವ ಕಾರಣ ಮುಂದಿಟ್ಟುಕೊಂಡು ವಿದ್ಯುತ್‍ ದರ ಹೆಚ್ಚಳ ಮಾಡಲಾಗಿದೆ ಎಂಬುದರಲ್ಲಿ ಸತ್ಯಾಂಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದರ ಹೆಚ್ಚಳಕ್ಕೂ ಮುನ್ನಾ ಜನಸಾಮಾನ್ಯರೊಂದಿಗೆ ಚರ್ಚಿಸುವ ವ್ಯವಧಾನ ಸಹ ಇಲ್ಲದೇ ದರ ಹೆಚ್ಚಳಕ್ಕೆ ಸೂಚನೆ ನೀಡಿರುವ ಮುಖ್ಯಮಂತ್ರಿ ಕ್ರಮವನ್ನು ರಾಜ್ಯದ ಎಲ್ಲಾ ರೈತರ ಮತ್ತು ವಿದ್ಯುತ್ ಬಳಕೆದಾರರು ಖಂಡಿಸುತ್ತಿದ್ದಾರೆ. ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ವಿರೋಧಿಸಿ ಎಲ್ಲಾ ಜಿಲ್ಲೆಗಳಲ್ಲಿ ಇಂದು ಸಾಂಕೇತಕವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಲಾಗುತ್ತಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ತಿಳಿಸಿದರು.

ದರ ಹೆಚ್ಚಳ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರದಲ್ಲಿರುವ ಎಲ್ಲಾ ಬೆಸ್ಕಾಂ ಕಚೇರಿ ಮುಂಭಾಗ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ.ಜಿ.ಕುಮಾರ್ ಮಾತನಾಡಿ, ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಇದ್ದು, ವಿದ್ಯುತ್ ಉತ್ಪಾದನೆಗೆ ಯಾವುದೇ ತೊಂದರೆ ಆಗುತ್ತಿಲ್ಲ. ಇಷ್ಟಾದರೂ ಸರ್ಕಾರ ಜನರ ಮುಗ್ದತೆಯನ್ನು ಬಂಡವಾಳ ಮಾಡಿಕೊಂಡು ಏಕಾಏಕಿ ವಿದ್ಯುತ್ ದರ ಹೆಚ್ಚಳ ಮಾಡಿರುವ ಕ್ರಮ ಸರಿಯಲ್ಲ ಎಂದು ತಿಳಿಸಿದರು.

ಬೆಂಗಳೂರಿನಂತಹ ಮಹಾನಗರಗಳಲ್ಲಿ ಎಷ್ಟೋ ಕಂಪನಿಗಳು ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿವೆ, ನಿರಂತರವಾಗಿ ವಿದ್ಯುತ್ ಸೋರಿಕೆ ಆಗುತ್ತಿದೆ, ಇಂತವರ ವಿರುದ್ಧ ಕ್ರಮ ವಹಿಸಿ ಸರ್ಕಾರ ತನ್ನ ಖಜಾನೆಯನ್ನು ವೃದ್ದಿಸಿಕೊಳ್ಳದೇ ರೈತರ ಮೇಲೆ ದರ ಏರಿಕೆ ಮಾರ್ಗ ಹುಡುಕಿಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಸ್ಕಾಂ ಮುಖ್ಯ ಎಂಜಿನಿಯರ್ ಶಿವಕುಮಾರ್ ಮನವಿ ಸ್ವೀಕರಿಸಿ, ತಮ್ಮ ಮನವಿಯಲ್ಲಿನ ಸಾರಾಂಶವನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ರಾಜ್ಯ ಸಂಚಾಲಕ ಎ.ಪಿ. ಕೃಷ್ಣಪ್ಪ, ಸಂಘಟನೆಯ ಗೌರವಾಧ್ಯಕ್ಷ ನಂಜಂಡಯ್ಯ, ಕಾರ್ಯಾಧ್ಯಕ್ಷ ವೀರೇಶ್, ಜಿಲ್ಲಾ ಪ್ರಧಾನ ಸಂಚಾಲಕ ಆನಂದ್, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಅರುಣ್, ಚಂದ್ರಶೇಖರ್, ರೇವಣ್ಣ, ರಾಜು, ಜಿಲ್ಲಾ ಮಹಿಳಾ ಪದಾಧಿಕಾರಿ ಎಂ.ಎಸ್. ಲಾವಣ್ಯ, ಪ್ರಕಾಶ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !