ಗುರುವಾರ , ಆಗಸ್ಟ್ 11, 2022
26 °C

ರಾಮನಗರ: ಅಗ್ನಿಪಥ ಕೈಬಿಡಲು ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಶುಕ್ರವಾರ ರೈತ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಕೂಡಲೇ ಅಗ್ನಿಪಥ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚೀಲೂರು ಮುನಿರಾಜು ಮಾತನಾಡಿ, ಅಗ್ನಿಪಥ ಯೋಜನೆಯು ಜೈಜವಾನ್, ಜೈಕಿಸಾನ್ ಘೋಷಣೆಯನ್ನು ತಿರುಚಲು ನಡೆದಿರುವ ಹುನ್ನಾರವಾಗಿದೆ. ಇದು ದೇಶದ ಭವಿಷ್ಯದೊಂದಿಗೆ ಆಡುತ್ತಿರುವ ಚೆಲ್ಲಾಟವಾಗಿದೆ. ರಾಷ್ಟ್ರದ ಭದ್ರತೆ ಹಾಗೂ ನಿರುದ್ಯೋಗಿ ಯುವಕರ ಕನಸಿಗೆ ಕಲ್ಲು ಹಾಕುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರನ್ನು ಈ ದೇಶದ ಯೋಧರು ಎಂದು ಸಂಬೋಧಿಸಲಾಗುತ್ತದೆ. ಬಹುತೇಕ ಸೈನಿಕರು ರೈತಾಪಿ ವರ್ಗದಿಂದಲೇ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ನೋ ರ‍್ಯಾಂಕ್, ನೋ ‍ಪೆನ್ಷನ್ ಎಂಬ ಈ ಯೋಜನೆ ಆರಂಭಿಸಿರುವುದು ಇಡೀ ದೇಶ ತಲೆತಗ್ಗಿಸುವ ವಿಷಯವಾಗಿದೆ. ರೈತ ಚಳವಳಿಯ ಕಾರಣದಿಂದ ಸೋತು ಕಂಗಾಲಾಗಿದ್ದ ಕೇಂದ್ರ ಸರ್ಕಾರ ರೈತರ ಮೇಲೆ ಸೇಡು ತೀರಿಸಿಕೊಳ್ಳಲು ಮಾಡುತ್ತಿರುವ ತಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು