ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಚಳವಳಿಗಾರರ ಬಂಧನ ಖಂಡಿಸಿ ಕರವೇ ಪ್ರತಿಭಟನೆ

Published 29 ಡಿಸೆಂಬರ್ 2023, 7:14 IST
Last Updated 29 ಡಿಸೆಂಬರ್ 2023, 7:14 IST
ಅಕ್ಷರ ಗಾತ್ರ

ಕನಕಪುರ: ಕನ್ನಡ ಭಾಷೆ ಮತ್ತು ನಾಡಿಗಾಗಿ ಹೋರಾಟ ಮಾಡುತ್ತಿರುವ ಚಳವಳಿಗಾರರನ್ನು ಬಂಧಿಸಿರುವುದು ಖಂಡನೀಯ. ಬಂಧಿಸಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ಕರವೇ ಜಿಲ್ಲಾಧ್ಯಕ್ಷ ವಾಡೇದೊಡ್ಡಿ ಕಬ್ಬಾಳೇಗೌಡ ಒತ್ತಾಯಿಸಿದರು.

ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗ ಸರ್ಕಾರ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿ ಜೈಲಿನಲ್ಲಿ ಇಟ್ಟಿರುವುದನ್ನು ವಿರೋಧಿಸಿ ಗುರುವಾರ ಕರವೇ ವತಿಯಿಂದ ನಡೆಸಿದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.

ಕನ್ನಡ ಭಾಷೆ ಬಳಸದವರ ವಿರುದ್ಧ ಶಾಂತಿಯುತ ಹೋರಾಟ ನಡೆಸಿ, ಶೇ60ರಷ್ಟು ಕನ್ನಡ ಬಳಸದ ಫ್ಲೆಕ್ಸ್‌ ಮತ್ತು ಬೋರ್ಡ್‌ ತೆರವುಗೊಳಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹೋರಾಟಗಾರರನ್ನು ಬಂಧಿಸಿ ಜೈಲಿನಲ್ಲಿಟ್ಟಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷ ಜೈರಾಮು, ಶ್ರೀನಿವಾಸ್‌, ಅರುಣ್‌ಕುಮಾರ್‌, ಕೆ.ಡಿ‍.ಶೇಖರ್‌, ಉಮೇಶ್‌, ರಮೇಶ್‌, ರವಿ, ಪ್ರಶಾಂತ್‌, ಅಂದಾನಿ.ಎಸ್‌ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT