ಭಾನುವಾರ, ಜನವರಿ 19, 2020
24 °C

ಯೇಸು ಪ್ರತಿಮೆ ವಿರೋಧಿಸಿ ಕನಕಪುರದಲ್ಲಿ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಸೋಮವಾರ ಕನಕಪುರದಲ್ಲಿ ಬೃಹತ್‌ ಮೆರವಣಿಗೆ ನಡೆಯಿತು.

ಅಯ್ಯಪ್ಪ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆಯು ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಂದಿತು. ಸುಮಾರು ಒಂದು ಕಿ.ಮೀ ಉದ್ದದ ಮೆರವಣಿಗೆಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಹೆಜ್ಜೆ ಹಾಕಿದರು.

ಬಳಿಕ ಚನ್ನಬಸಪ್ಪ ವೃತ್ತದಲ್ಲಿ ಜಾಥಾ ಸಮಾವೇಶಗೊಂಡಿತು. ಹಿಂದೂ ದೇವತೆಗಳು, ಮುನೇಶ್ವರನ ಹೆಸರಿನಲ್ಲಿ ಘೋಷಣೆ ಕೂಗಿದ ಜನರು ಡಿಕೆ ಶಿವಕುಮಾರ್ ವಿರುದ್ಧವಾಗಿಯೂ ಧಿಕ್ಕಾರ ಕೂಗಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು