ಮಂಗಳವಾರ, ಸೆಪ್ಟೆಂಬರ್ 28, 2021
21 °C

ಕನಕಪುರ: ಬಡ ಕುಟುಂಬಗಳಿಗೆ ದಿನಸಿ ಪೂರೈಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಇಲ್ಲಿನ ಮಹಾರಾಜರಕಟ್ಟೆ ಸಮೀಪದ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ವಾಸಿಸುವ ಎಲ್ಲರೂ ಕೂಲಿ ಮಾಡುವವರೇ ಆಗಿದ್ದಾರೆ. ಸಂಕಷ್ಟದಲ್ಲಿರುವ ಇವರಿಗೆ ಸಹಾಯವಾಗಲೆಂದು ಯುವ ಕಾಂಗ್ರೆಸ್‌ ವತಿಯಿಂದ ದಿನಸಿ ಕಿಟ್‌ ವಿತರಣೆ ಮಾಡಲಾಗುತ್ತಿದೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್‌ ತಿಳಿಸಿದರು.

ಕನಕಪುರ ಯುವ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಬುಡಕಟ್ಟು ಜನರಿಗಾಗಿ ಭಾನುವಾರ ಏರ್ಪಡಿಸಿದ್ದ ದಿನಸಿ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದೀಪು ಮಾತನಾಡಿ, ಕೊರೊನಾ ಸಂಕಷ್ಟದ ಸಮಯದಲ್ಲಿ ಯುವ ಕಾಂಗ್ರೆಸ್‌ ಕಷ್ಟದಲ್ಲಿರುವ ಜನತೆಗೆ ಸಹಾಯ ಮಾಡುತ್ತಿದೆ. ಹೊಂಗಾಣಿದೊಡ್ಡಿಯಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳನ್ನು ಗುರುತಿಸಿ ದಿನಸಿ ಕಿಟ್‌ ನೀಡಲಾಗುತ್ತಿದೆ ಎಂದರು.

ಕೊರೊನಾ ಸೋಂಕು ನಿರ್ಮೂಲನೆಯಾಗುವ ತನಕ ಯುವ ಕಾಂಗ್ರೆಸ್‌ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಕಾರ್ಯ ಮುಂದುವರಿಸಲಿದೆ ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್, ವಿನೋದ್, ಪದಾಧಿಕಾರಿಗಳಾದ ಕಿರಣ್, ಮಂಜು, ಹೇಮಚಂದ್ರ, ಶ್ರೀಧರ್‌, ನಾಗೇಂದ್ರ, ಬಸವ, ಅರ್ಜುನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು