ಮಂಗಳವಾರ, ಮೇ 24, 2022
25 °C

ಪೊಲೀಸ್ ಇಲಾಖೆಯಿಂದಲೇ ಪಿಎಸ್‌ಐ ನೇಮಕಾತಿ ಅಕ್ರಮ ಬಹಿರಂಗ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರಿಗೆ ಆದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಪೊಲೀಸ್ ಇಲಾಖೆಯವರೇ ಪಿಎಸ್ಐ ನೇಮಕಾತಿ ಅಕ್ರಮವನ್ನು ಬಯಲಿಗೆ ಎಳೆದಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಬುಧವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು.  ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಅಪಘಾತಕ್ಕೂ ಪಿಎಸ್‌ಐ ಅಕ್ರಮ ಬಯಲಿಗೆ ಬರುವುದಕ್ಕೂ ನಂಟಿದೆ. ಪೊಲೀಸ್ ಇಲಾಖೆ ಇದನ್ನು ಅಪಘಾತ ಎಂದು ಹೇಳಿತ್ತು. ಆದರೆ, ಬಿಜೆಪಿ ನಾಯಕರು ಉರ್ದು ವಿಚಾರವಾಗಿ ಆದ ಗಲಾಟೆ ಎಂದು ಕಥೆ ಕಟ್ಟಿದ್ದರು. ಬಿಜೆಪಿಯ ಒಬ್ಬ ವಕ್ತಾರ ಕಮಲ್ ಪಂಥ್ ವಿರುದ್ಧ ಆರೋಪ ಮಾಡಿದ್ದರು.  ಅದೇ ವಕ್ತಾರರಿಗೆ ಕಲಬುರ್ಗಿಯಲ್ಲಿ ಬಂಧನ ಆದವರ ಲಿಂಕ್ ಇತ್ತು. ಹೀಗಾಗಿ‌ ನಿಷ್ಠಾವಂತ ಅಧಿಕಾರಿಗೆ ಆದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು, ಸರ್ಕಾರಕ್ಕೆ ಬುದ್ಧಿ ಕಲಿಸಲು ಅವರ ಅಭಿಮಾನಿಗಳೇ ಇದನ್ನು ಬಯಲಿಗೆ ಎಳೆದರು ಎಂದು ದೂರಿದರು.

ಶೇ 30ರಷ್ಟು ಮಂದಿ ಅಕ್ರಮದಲ್ಲಿ ಭಾಗಿ ಆಗಿರಬಹುದು. ಆದರೆ ಇನ್ನುಳಿದವರು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು.

ಇವುಗಳನ್ನೂ ಓದಿ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು