ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

ಇಂಗ್ಲಿಷ್‌ ವಿಷಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ನೋಂದಣಿ
Last Updated 7 ಸೆಪ್ಟೆಂಬರ್ 2020, 12:40 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಾದ್ಯಂತ ಸೋಮವಾರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭಗೊಂಡಿತು.

2019-2020 ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಪದವಿಪೂರ್ವ ಶಿಕ್ಷಣ ಇಲಾಖೆಯು ಅವಕಾಶ ಮಾಡಿಕೊಟ್ಟಿದೆ. ಕಲಾ ವಿಭಾಗದಲ್ಲಿ 1249 ಮಂದಿ, ವಾಣಿಜ್ಯ ವಿಭಾಗದಲ್ಲಿ 1348 ಮಂದಿ ಹಾಗೂ ವಿಜ್ಞಾನ ವಿಭಾಗದಲ್ಲಿ 631 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಕನ್ನಡ ಮಾಧ್ಯಮದಲ್ಲಿ 2026 ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ 1382 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಕಳೆದ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಹೀಗಾಗಿ ಪೂರಕ ಪರೀಕ್ಷೆಯಲ್ಲಿ 2066 ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಪೂರಕ ಪರೀಕ್ಷೆ ಸುಸೂತ್ರವಾಗಿ ನಡೆಸುವ ಸಲುವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯು ವಿವಿಧ ಕ್ರಮಗಳನ್ನು ಕೈಗೊಂಡಿದೆ. ಪ್ರತಿ ತಾಲ್ಲೂಕಿನಲ್ಲಿಯೂ ಒಂದೊಂದು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಪ್ರತಿ ಕೇಂದ್ರದಲ್ಲೂ ದೇಹದ ಉಷ್ಣತೆ ತಪಾಸಣೆ, ಅಂತರ ಪಾಲನೆ, ಮಾಸ್ಕ್ ಧಾರಣೆ, ಸ್ಯಾನಿಟೈಸರ್ ವಿತರಣೆ ಸೇರಿದಂತೆ ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೋವಿಡ್‌ನಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಪೂರಕಾ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಅರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಲ್‍ಟಿಕೆಟ್ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT