ರಾಮನಗರ: ದ್ವಿತೀಯ ಪಿಯುಸಿ ಪರೀಕ್ಷೆ–2 ಸೋಮವಾರದಿಂದ ಶುರುವಾಗಿದ್ದು, ವೆಬ್ ಕ್ಯಾಸ್ಟಿಂಗ್ ನಿಗಾದಲ್ಲಿ ಜರುಗಿತು. ಜಿಲ್ಲೆಯ 4 ಕೇಂದ್ರಗಳಲ್ಲಿ ನಡೆದ ಕನ್ನಡ ವಿಷಯದ ಪರೀಕ್ಷೆಗೆ 357 ವಿದ್ಯಾರ್ಥಿಗಳ ಪೈಕಿ, 289 ವಿದ್ಯಾರ್ಥಿಗಳು ಹಾಜರಾದರು. 68 ವಿದ್ಯಾರ್ಥಿಗಳು ಗೈರು ಹಾಜರಾದರು.

‘ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪರೀಕ್ಷೆ ಜರುಗಿತು. ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ವೆಬ್ ಕ್ಯಾಸ್ಟಿಂಗ್ ಮೂಲಕ ನಿಗಾ ಇಡಲಾಯಿತು. ಜಿಲ್ಲಾ ಪಂಚಾಯಿತಿ ಕಚೇರಿ ಸಂಕೀರ್ಣದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ವೆಬ್ ಕ್ಯಾಸ್ಟಿಂಗ್ ವೀಕ್ಷಿಸಲಾಯಿತು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ನಾಗಮ್ಮ ತಿಳಿಸಿದರು.

‘ಪೊಲೀಸ್ ಬಂದೋಬಸ್ತ್ನಲ್ಲಿ ತ್ರಿಸದಸ್ಯ ಸಮಿತಿ ನೇತೃತ್ವದಲ್ಲಿ ಜಿಪಿಎಸ್ ಅಳವಡಿಸಿದ ವಾಹನಗಳಲ್ಲಿ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ರವಾನಿಸಲಾಯಿತು. ಕೇಂದ್ರಗಳ ಬಳಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಮೇ 16ರವರೆಗೆ ನಡೆಯುವ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.