ಮಂಗಳವಾರ, ಸೆಪ್ಟೆಂಬರ್ 28, 2021
22 °C

ಭಾರತೀಯರು ಫುಲೆ ಆದರ್ಶ ಪಾಲಿಸಬೇಕು: ಡಾ.ವಿ. ವೆಂಕಟೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಆದರ್ಶಗಳನ್ನು ಭಾರತೀಯರು ಪಾಲಿಸಬೇಕು ಎಂದು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ವಿ. ವೆಂಕಟೇಶ್ ಕರೆ ನೀಡಿದರು.

ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ನಂತರ ಮಾತನಾಡಿದ ಅವರು, ಆತ್ಮಸ್ಥೈರ್ಯ ಇದ್ದಲ್ಲಿ ಸಮಸ್ಯೆಗಳನ್ನು ಮೆಟ್ಟಿನಿಂತು ಗೆಲ್ಲಲು ಸಾಧ್ಯ ಎಂಬುದನ್ನು ಅವರು ತೋರಿಸಿ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಧುಸೂದನಾಚಾರ್ಯ ಜೋಷಿ, ಇತಿಹಾಸ ವಿಭಾಗದ ಡಾ.ಅಣ್ಣಯ್ಯ ತೈಲೂರು, ಗ್ರಂಥಪಾಲಕ ವೆಂಕಟೇಶಯ್ಯ, ಕ್ರೀಡಾ ವಿಭಾಗದ ಮುಖ್ಯಸ್ಥ ನಂಜುಂಡ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು