ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಪಲ್ಸ್ ಪೋಲಿಯೊ ಲಸಿಕೆ 31ರಿಂದ: ಡಿಎಚ್‌ಒ ಡಾ. ನಿರಂಜನ

Last Updated 29 ಜನವರಿ 2021, 11:08 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಾದ್ಯಂತ ಇದೇ 31ರಿಂದ ಪೋಲಿಯೊ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಸಮೀಪದ ಕೇಂದ್ರಗಳಲ್ಲಿ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್ ಮನವಿ ಮಾಡಿದರು.

‘31 ರಂದು ಜಿಲ್ಲೆಯ ಎಲ್ಲಾ ಬೂತ್, ಫೆಬ್ರವರಿ 1 ಹಾಗೂ 2 ರಂದು ಮನೆ ಮನೆಗೆ ಆರೋಗ್ಯ ಸಿಬ್ಬಂದಿ ತೆರಳಿ ಲಸಿಕೆಯಿಂದ ಬಿಟ್ಟು ಹೋಗಿರುವ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ಫೆ. 1 ರಿಂದ 3 ರವರೆಗೆ ಟ್ರಾನ್ಸಿಟ್ ಹಾಗೂ ವಿಶೇಷ ಸ್ಥಳಗಳಲ್ಲಿ ತೆರೆಯಲಾಗುವ ಬೂತ್ ಗಳಲ್ಲಿ ಸಹ ಲಸಿಕೆ ನೀಡಲಾಗುವುದು’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆರ್.ಸಿ.ಎಚ್. ಅಧಿಕಾರಿ ಡಾ. ಪದ್ಮಾ ಮಾತನಾಡಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಪ್ರವಾಸಿ ಸ್ಥಳಗಳನ್ನು ಗುರುತಿಸಿ ಹೆಚ್ಚಿನ ನಿಗಾ ವಹಿಸಿ ಲಸಿಕೆ ನೀಡಲು 29 ಟ್ರಾನ್ಸಿಟ್ ಕೇಂದ್ರ ತೆರೆಯಲಾಗಿದೆ. ಗುಡ್ಡಗಾಡು ಪ್ರದೇಶ, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು, ಕಾಮಗಾರಿ ಸ್ಥಳಗಳು, ವಲಸೆ ಸಮುದಾಯ ವಾಸಿಸುವ ಸ್ಥಳಗಳಲ್ಲಿ ವಲಸೆ ಕಾರ್ಮಿಕರು ವಾಸಿಸುವ ಸ್ಥಳದಲ್ಲಿ ಲಸಿಕೆ ನೀಡಲು 21 ಮೊಬೈಲ್ ತಂಡಗಳನ್ನು ನಿಯೋಜಿಸಲಾಗಿದೆ. ಲಸಿಕಾ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು 5 ಬೂತ್‌ಗೆ ಒಬ್ಬರಂತೆ 122 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

31 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಪಲ್ಸ್ ಪೋಲಿಯೊ ಬೂತ್‌ಗಳು ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಿದರು.

ಅಂಕಿ–ಅಂಶ
80,348:
ಜಿಲ್ಲೆಯಲ್ಲಿ ಲಸಿಕೆ ನೀಡಲು ಗುರುತಿಸಲಾದ ಮಕ್ಕಳು
550: ಲಸಿಕಾ ಕೇಂದ್ರಗಳು
2276:ಲಸಿಕೆ ನೀಡುವ ಸಿಬ್ಬಂದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT