ಪಲ್ಸ್ ಪೋಲಿಯೊ ಅಭಿಯಾನದ ಕುರಿತು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪ್ರಚಾರ ಮಾಡಬೇಕು. ಆಟೊಗಳಲ್ಲಿ ಎರಡು ದಿನ ಮುಂಚಿತವಾಗಿ ಪ್ರಚಾರಕ್ಕೆ ಕ್ರಮ ಕೈಗೊಳ್ಳಬೇಕು. ಬ್ಯಾನರ್‌ಗಳು, ಕರಪತ್ರಗಳನ್ನು ಮುದ್ರಿಸಿ ಪೋಲಿಯೋ ಲಸಿಕೆ ಹಾಕಿಸುವಂತೆ ಹಾಗೂ ಶಾಲಾ ಮಕ್ಕಳಿಂದ ಜಾಥಾ ಆಯೋಜಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಎಲ್ಲಾ ಬೂತ್‌ಗಳಲ್ಲಿ ಲಸಿಕೆ ಹಾಕಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಅಭಿಯಾನದ ಸಂದರ್ಭದಲ್ಲಿ ವಿದ್ಯುತ್ ಅಡಚಣೆಯಾಗದಂತೆ ಬೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸೂಚಿಸಿದರು.