ರಾಮನಗರ: ‘ಡಿಸೆಂಬರ್ 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಅಂದು ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದು ಗ್ರೇಡ್-2 ತಹಶೀಲ್ದಾರ್ ಜಯಣ್ಣ ಅವರು ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೊ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪಲ್ಸ್ ಪೋಲಿಯೊ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ನಗರಸಭೆ ಕಸ ವಿಲೇವಾರಿ ವಾಹನಗಳಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಕುರಿತು ಆಡಿಯೋ ಜಿಂಗಲ್ಗಳನ್ನು ಹಾಕಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಪ್ರಮುಖ ಸ್ಥಳಗಳಲ್ಲಿ ಜಾಗೃತಿ ಮೂಡಿಸಲು ಹೋರ್ಡಿಂಗ್ಸ್ಗಳನ್ನು ಅಳವಡಿಸಬೇಕು. ರೋಟರಿ ಕ್ಲಬ್, ಲಯನ್ಸ್, ರೋಟರಿ ಸಿಲ್ಕ್ ಸಿಟಿ ಸಂಸ್ಥೆಯವರು ಲಸಿಕಾ ಕಾರ್ಯಕ್ರಮಕ್ಕೆ ಹೆಚ್ಚಿನ ನೆರವು ನೀಡಬೇಕು’ ಎಂದು ಕೋರಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಾರ್ವಜನಿಕ ಪ್ರದೇಶಗಳಲ್ಲಿ ಹಾಗೂ ಪ್ರಮುಖವಾಗಿ ಶಾಲಾ– ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ಮಾಡದಿರಲು ಹೆಚ್ಚಿನ ಕ್ರಮ ವಹಿಸುವಂತೆ ಸಲಹೆ ನೀಡಿದರು. ಪ್ರಸಕ್ತ ವರ್ಷದಲ್ಲಿ ರಾಮನಗರ ತಾಲ್ಲೂಕಿನಲ್ಲಿ ಒಟ್ಟು 13 ಕಡೆಕಾರ್ಯಚರಣೆ ನಡೆಸಿ ₹21,490 ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ಸಭೆ ಗಮನಕ್ಕೆ ತಂದರು.

ಸಭೆಯಲ್ಲಿ ಉಪ ತಹಶೀಲ್ದಾರ್ ರುದ್ರಮ್ಮ, ಮಕ್ಕಳ ತಜ್ಞೆ ಡಾ. ನಳಿನಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತ, ರೋಟರಿ ಸಂಸ್ಥೆಯ ಅಧ್ಯಕ್ಷೆ ಸೌಮ್ಯ ಕುಮಾರಸ್ವಾಮಿ, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಪ್ರಕಾಶ್, ಅಲಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಲಾವಣ್ಯ, ಫಯಾಜ್, ದಾಸಯ್ಯ, ಉಮಾದೇವಿ, ಕೃಷ್ಣಮೂರ್ತಿ, ಆರೋಗ್ಯ ಇಲಾಖೆ, ರಾಮನಗರ ನಗರಸಭೆ, ಬಿಡದಿ ಪುರಸಭೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಕ್ಫ್ ಬೋರ್ಡ್, ಆರ್ಟಿಒ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

22251 ಮಕ್ಕಳಿಗೆ ಲಸಿಕೆ ಗುರಿ

ಐದು ದಿನ ನಡೆಯುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಪ್ರಯುಕ್ತ ರಾಮನಗರ ತಾಲ್ಲೂಕಿನಲ್ಲಿ ಒಟ್ಟು 135 ತಂಡಗಳನ್ನು ರಚಿಸಲಾಗಿದೆ. 22251 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ರೈಲು ನಿಲ್ದಾಣ ಬಸ್ ನಿಲ್ದಾಣಗಳಲ್ಲಿ ಟೋಲ್ಗಳಲ್ಲಿ ಟ್ರಾನ್ಸಿಟ್ ಬೂತ್ಗಳು ಹಾಗೂ ಮೂರು ಮೊಬೈಲ್ ತಂಡಗಳು ತಾಲ್ಲೂಕಿನಾದ್ಯಂತ ಕಾರ್ಯನಿರ್ವಹಿಸಲಿವೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಉಮಾ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.