ಅಪ್ಪುಗೆ ಭಾವಪೂರ್ಣ ಶ್ರದ್ಧಾಂಜಲಿ

ಚನ್ನಪಟ್ಟಣ: ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್‌ಕುಮಾರ್ ಅವರ ಪುಣ್ಯತಿಥಿಯನ್ನು ತಾಲ್ಲೂಕಿನ ದಶವಾರ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಭಾನುವಾರ ಆಚರಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ನಟನೆ, ಸರಳತೆ, ಆತ್ಮೀಯ ಗುಣಗಳಿಂದ ಅಪ್ಪು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಅಕಾಲಿಕ ನಿಧನವನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕಿದೆ ಎಂದು ಗ್ರಾಮದ ಮುಖಂಡ ಪ್ರಭು ತಿಳಿಸಿದರು.
ಪುನೀತ್ ಭಾವಚಿತ್ರವನ್ನಿಟ್ಟು ಅಪ್ಪುಗೆ ಇಷ್ಟವಾದ ಎಲ್ಲಾ ತರಹದ ತಿಂಡಿ, ತಿನಿಸುಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ಅನ್ನ ಸಂತರ್ಪಣೆ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.