ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ನಿರ್ಧಾರ ಶೀಘ್ರ ಪ್ರಕಟ: ಡಿಸಿಎಂ ಆಶ್ವತ್ಥ ನಾರಾಯಣ

Last Updated 23 ಫೆಬ್ರುವರಿ 2021, 2:56 IST
ಅಕ್ಷರ ಗಾತ್ರ

ರಾಮನಗರ: ಮೀಸಲಾತಿ ಹೋರಾಟದ ವಿಚಾರದಲ್ಲಿ ರಾಜ್ಯ ಸರ್ಕಾರ ಎಲ್ಲ ಜಾತಿ–ಜನಾಂಗದವರನ್ನೂ ಪರಿಗಣನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಪಂಚಮಸಾಲಿ ಸಮುದಾಯದ ಹೋರಾಟದ ಕುರಿತು ಸೋಮವಾರ ನಗರದಲ್ಲಿ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು.

‘ಮೀಸಲಾತಿ ಬಗ್ಗೆ ಯಾರು ಯಾರ ಬೇಡಿಕೆ ಇದೆಯೋ ಅವರೆಲ್ಲ ತಮ್ಮ ಭಾವನೆಗಳನ್ನು ಹೋರಾಟದ ಮುಖಾಂತರ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಸರ್ಕಾರ ವೈಜ್ಞಾನಿಕವಾಗಿ, ಕ್ರಮಬದ್ಧವಾಗಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪ್ರಕಟಿಸಲಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ’ ಎಂದು ಹೇಳಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ಮಂಗಳವಾರ ಬೆಂಗಳೂರಿನಲ್ಲಿ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಪ್ರತಿಕ್ರಿಯಿಸಿ, ‘ಪುಟ್ಟಣ್ಣ ಅವರ ಈ ಹೋರಾಟ ಸರ್ಕಾರದ ವಿರುದ್ಧ ಎಂದು ಅರ್ಥೈಸಬಾರದು. ಅವರು ತಮ್ಮ ಮತದಾರರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT