ಮಾಗಡಿ: ಪಟ್ಟಣದ ಸುತ್ತಮುತ್ತ ಮಂಗಳವಾರ ಸಂಜೆ ಹದಮಳೆ ಸುರಿದಿದೆ.
ಒಂದು ವಾರದಿಂದ ಬಿರುಬಿಸಿಲು ಜನತೆಯನ್ನು ಕಂಗೆಡಿಸಿತ್ತು. ರೈತರು ತಮ್ಮ ಹೊಲಗಳಲ್ಲಿ ಬಿತ್ತನೆ ಮಾಡಿದ್ದ, ರಾಗಿ, ತೊಗರಿ, ಅವರೆ, ಹೆಸರು, ಮುಸಿಕಿನ ಜೋಳ, ಬಿಳಿಜೋಳ ಇತರೆ ಬೆಳೆಗಳು ಮಳೆ ಇಲ್ಲದೆ ಒಣಗಿದ್ದವು. ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.
ಆದರೆ, ಮಂಗಳವಾರ ಸಂಜೆ ಸುರಿದ ಮಳೆ ರೈತರಲ್ಲಿ ಆಶಾಭಾವನೆ ಮೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.