ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರದಲ್ಲಿ ಉತ್ತಮ ವರ್ಷಧಾರೆ

Last Updated 24 ಸೆಪ್ಟೆಂಬರ್ 2019, 15:38 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಪರಿಣಾಮವಾಗಿ ಕೆರೆ–ಕಟ್ಟೆಗಳು ತುಂಬಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ.

ಭಾನುವಾರ ರಾತ್ರಿಯಿಂದ ಮಂಗಳವಾರ ರಾತ್ರಿಯವರೆಗೆ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಸುರಿದಿದೆ. ಕಳೆದ ಎರಡು ದಿನದಲ್ಲಿಯೇ ಜಿಲ್ಲೆಯಲ್ಲಿ ನೂರು ಮಿಲಿಮೀಟರ್‌ನಷ್ಟು ಅಧಿಕ ಮಳೆಯಾಗಿದೆ. ಸೆಪ್ಟೆಂಬರ್‌ನಲ್ಲಿನ ವಾಡಿಕೆ ಮಳೆ 140 ಮಿ.ಮೀ.ಗೆ ಪ್ರತಿಯಾಗಿ ಈವರೆಗೆ 150 ಮಿ.ಮೀ. ಮಳೆ ಸುರಿದಿದ್ದು, ಕೃಷಿಗೆ ಅನುಕೂಲವಾಗಿದೆ. ಸೋಮವಾರ ರಾತ್ರಿ ಚನ್ನಪಟ್ಟಣ ತಾಲ್ಲೂಕಿನಲ್ಲಿ 72 ಮಿ.ಮೀ, ಕನಕಪುರದಲ್ಲಿ 54 ಮಿ.ಮೀ, ಕನಕಪುರದಲ್ಲಿ 44 ಹಾಗೂ ಮಾಗಡಿ ತಾಲ್ಲೂಕಿನಲ್ಲಿ 28 ಮಿ.ಮೀ.ನಷ್ಟು ಸರಾಸರಿ ಮಳೆ ಪ್ರಮಾಣ ದಾಖಲಾಗಿದೆ.

ಚನ್ನಪಟ್ಟಣ–ಮದ್ದೂರು ಗಡಿಭಾಗದಲ್ಲಿ ಶಿಂಷಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಇಗ್ಗಲೂರು ಬ್ಯಾರೇಜ್‌ ಭರ್ತಿಯಾಗಿದ್ದು, ಮಂಗಳವಾರ ಕ್ರೆಸ್ಟ್‌ಗೇಟ್‌ಗಳ ಮೂಲಕ ನದಿಗೆ ನೀರು ಹರಿಬಿಡಲಾಯಿತು. ಚನ್ನಪಟ್ಟಣದಲ್ಲಿ ತಗ್ಗಿನಲ್ಲಿರುವ ಕೆಲವು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT