ಬುಧವಾರ, ಅಕ್ಟೋಬರ್ 16, 2019
22 °C

ರಾಮನಗರ ಜಿಲ್ಲೆಯಾದ್ಯಂತ ಉತ್ತಮ ವರ್ಷಧಾರೆ

Published:
Updated:
Prajavani

ರಾಮನಗರ: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸರಾಸರಿ 33 ಮಿಲಿಮೀಟರ್‌ನಷ್ಟು ಮಳೆ ಸುರಿದಿದ್ದು, ಕೆರೆ ಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ.

ರಾಮನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಸರಾಸರಿ 55 ಮಿ.ಮೀ. ಮಳೆ ಪ್ರಮಾಣ ದಾಖಲಾಗಿದೆ. ಕನಕಪುರದಲ್ಲಿ 33 ಮಿ.ಮೀ. ಮಾಗಡಿಯಲ್ಲಿ 28 ಹಾಗೂ ಚನ್ನಪಟ್ಟಣದಲ್ಲಿ 18 ಮಿ.ಮೀ. ಸರಾಸರಿ ಮಳೆಯಾಗಿದೆ.  ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ವೃಷಭಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಇದರಿಂದಾಗಿ ಅಕ್ಕಪಕ್ಕದ ಪ್ರದೇಶಗಳಿಗೆ ಹಾನಿಯಾಗಿದೆ.

ಕನಕಪುರ ತಾಲ್ಲೂಕಿನ ಕುರುಬರಹಳ್ಳಿ ಬಳಿ ನದಿಗೆ ಅಡ್ಡಲಾಗಿ ಕಟ್ಟಲಾದ ಕೆಳ ಹಂತದ ಸೇತುವೆ ಮುಳುಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಜನರು ಪರದಾಡಿದರು. ಬರಡನಹಳ್ಳಿ, ಆನಮಾನಹಳ್ಳಿ ಸಹಿತ ಹಲವು ಕಡೆ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕೆ ಉರುಳಿವೆ. ದೊಡ್ಡಮುಡವಾಡಿ ಗ್ರಾಮದಲ್ಲಿ ವಿದ್ಯುತ್‌ ಅವಘಡದಿಂದಾಗಿ ಎಲೆಕ್ಟ್ರಾನಿಕ್‌ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ.

Post Comments (+)