‘ತಂಬಾಕು ನಿಷೇಧ ಜಾಗೃತಿ ಮೂಡಿಸಿ’

ಮಾಗಡಿ: ಪಟ್ಟಣದ ರಾಮರಾಜ ಅರಸ್ ರಸ್ತೆಯಲ್ಲಿ ಸಾರ್ವಜನಿಕರಿಗೆ ತಂಬಾಕು ನಿಯಂತ್ರಣ ಕಾಯ್ದೆ ಬಗ್ಗೆ ಅರಿವು ಮೂಡಿಸಲಾಯಿತು. ಕಾಯ್ದೆ ಅನುಷ್ಠಾನ ಅಧಿಕಾರಿ ಸಂಪತ್ ಮಾತನಾಡಿ, ತಂಬಾಕು ಉತ್ಪನ್ನಗಳ ಮಾರಾಟ ಅಪರಾಧ. ಧೂಮಪಾನದ ಬಗ್ಗೆ ಎಚ್ಚರಿಕೆ ನಾಮಫಲಕ ಅಳವಡಿಸಬೇಕು ಎಂದರು.
ಜಿಲ್ಲಾ ಮಟ್ಟದ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಪರಾಧ ಎಂದರು.
ತಾಲ್ಲೂಕು ಮಟ್ಟದ ಅಧಿಕಾರಿ ತುಕಾರಾಮ್, ಆರೋಗ್ಯ ಶಿಕ್ಷಣಾಧಿಕಾರಿ ಆರ್.ರಂಗನಾಥ್, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.
ಕೋಟ್ಪಾ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಲಾಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.