ರಾಮನಗರ: ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಪುಟ್ಟಸ್ವಾಮಿ ಗೌಡ ಅವರು ಈ ಸಲ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿಯವರಾದ ಅವರಿಗೆ ಪ್ರಶಸ್ತಿ ಬಂದಿರುವುದಕ್ಕೆ ಜಿಲ್ಲೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂದಹಾಗೆ, ಈ ಸಲ ಜಿಲ್ಲೆಯವರಿಗೆ ಸಿಕ್ಕಿರುವ ಏಕೈಕ ಪ್ರಶಸ್ತಿ ಇದಾಗಿದೆ.

ಪುಟ್ಟಸ್ವಾಮಿ ಗೌಡ ಅವರು ತಮ್ಮ ಹರೆಯದಲ್ಲಿ ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ನಂತರ, ಜಿಲ್ಲೆಯಲ್ಲಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಹೋರಾಟಗಳನ್ನು ಸಂಘಟಿಸುತ್ತಾ ಬಂದವರು. ಚನ್ನಪಟ್ಟಣ ಮತ್ತು ರಾಮನಗರದಲ್ಲಿ ನಡೆದ ಹೋರಾಟದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಪುಟ್ಟಸ್ವಾಮಿ ಗೌಡ ಅವರನ್ನು ಸನ್ಮಾನಿಸಲಾಗಿತ್ತು. ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ಹಿರಿಯ ಅಧಿಕಾರಿಗಳು ಅವರ ಮನೆಗೆ ತೆರಳಿ, ಸನ್ಮಾನ ಮಾಡಿ ಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.