ಕನಕಪುರ: ಕನ್ನಡ ರಾಜ್ಯೋತ್ಸವ ಕನ್ನಡಿಗರ ಹೆಮ್ಮೆಯ ಹಬ್ಬ. ಆದರೆ, ಸರ್ಕಾರದ ವಿವಿಧ ಇಲಾಖೆಗಳು ರಾಜ್ಯೋತ್ಸವ ಆಚರಿಸದೆ ಕನ್ನಡಕ್ಕೆ ಅಪಮಾನ ಮಾಡಿವೆ ಎಂದು ಕನ್ನಡಪರ ಹೋರಾಟಗಾರರು ಆರೋಪಿಸಿದ್ದಾರೆ.

ಪ್ರತಿ ಇಲಾಖೆ, ಕಚೇರಿಗಳಲ್ಲಿ ಕಡ್ಡಾಯವಾಗಿ ರಾಷ್ಟ್ರೀಯ ಹಬ್ಬ ಆಚರಿಸುವಂತೆ ಸರ್ಕಾರ ಸೂಚಿಸಿದೆ. ಆದರೆ, ಸಬ್ ರಿಜಿಸ್ಟರ್ ಕಚೇರಿ, ಬೂದಿಗುಪ್ಪೆ ಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೈಸ್ ಮಿಲ್ ಬಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಜ್ಯೋತ್ಸವ ಆಚರಿಸಿಲ್ಲ. ಈ ಬಗ್ಗೆ ತಹಶೀಲ್ದಾರ್ಗೆ ದೂರು ನೀಡಿರುವುದಾಗಿ ಕನ್ನಡ ಭಾಸ್ಕರ್, ಜಯಸಿಂಹ, ಕೆ.ಆರ್.ಸುರೇಶ್ ಹೇಳಿದ್ದಾರೆ.

ಕೆಲವು ಕಚೇರಿಗಳಲ್ಲಿ ಕಾಟಾಚಾರಕ್ಕಾಗಿ ರಾಜ್ಯೋತ್ಸವವನ್ನು ಆಚರಣೆ ಮಾಡಿದರೆ ಮತ್ತೆ ಕೆಲವು ಕಡೆ ಆಚರಣೆಯನ್ನೇ ಮಾಡದೆ ನಿರ್ಲಕ್ಷ ತೋರಿದ್ದಾರೆ, ಇವರುಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.