ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ: ಶಾಸಕ ಹುಸೇನ್

Published 12 ಜನವರಿ 2024, 11:49 IST
Last Updated 12 ಜನವರಿ 2024, 11:49 IST
ಅಕ್ಷರ ಗಾತ್ರ

ರಾಮನಗರ: ‘ನಗರದ ಹೊರವಲಯದಲ್ಲಿರುವ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಚಿವ ಸಂಪುಟದಲ್ಲಿ ಈಗಾಗಲೇ ಚರ್ಚೆ ಮಾಡಲಾಗಿದೆ’ ಎಂದು ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ರಾಮನ ಪಾದಸ್ಪರ್ಶವಾದ ಜಾಗದಲ್ಲಿ ಒಳ್ಳೆಯ ದೇಗುಲ ನಿರ್ಮಾಣವಾಗುತ್ತದೆ. ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಸಚಿವರ ಜೊತೆಗೂ ಚರ್ಚೆ ಮಾಡಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಬೆಟ್ಟ ಅಭಿವೃದ್ಧಿಗೆ ಅನುದಾನ ನಿಗದಿಯಾಗಲಿದೆ’ ಎಂದರು.

‘ಬಿಜೆಪಿಯವರಿಗೆ ರಾಮನ ವಿಚಾರ ಹೊಸದೇ ಹೊರತು ನಮಗಲ್ಲ. ಈ ಮಣ್ಣಿನಲ್ಲಿ ಎಲ್ಲಾ ಧರ್ಮಗಳಿಗೂ ಗೌರವವಿದೆ. ಆದರೆ, ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು’ ಎಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರಾಗುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT