ರಾಮನಗರ: ಮಾಧ್ಯಮ ಪ್ರತಿನಿಧಿಗಳು ಮೈಕ್ ಹಿಡಿಯುತ್ತಿದ್ದಂತೆ ಶಾಸಕರೇ ಎಲ್ಲವನ್ನೂ ಬಹಿರಂಗವಾಗಿಯೇ ಹೇಳುತ್ತಿರುವಾಗ ಫೋನ್ ಕದ್ದಾಲಿಕೆ ಮಾಡುವ ಅಗತ್ಯವೆನಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದರು.

‘ರಾಜ್ಯ ಸರ್ಕಾರ ತನ್ನದೇ ಪಕ್ಷದ ಶಾಸಕರ ಫೋನ್ ಕರೆ ಕದ್ದಾಲಿಕೆ ಮಾಡುತ್ತಿದೆ’ ಎಂಬ ಕುಮಾರಸ್ವಾಮಿ ಆರೋಪದ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರಿಗೆ ಅವರು ಈ ಪ್ರತಿಕ್ರಿಯೆ ನೀಡಿದರು.

‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸ್ವಾಮೀಜಿ ಫೋನ್ ಕದ್ದಾಲಿಕೆ ಮಾಡಿದ ಆರೋಪವಿತ್ತು. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕೇಂದ್ರ ಸರ್ಕಾರದ ವಿರುದ್ಧವೂ ಕದ್ದಾಲಿಕೆಯ ಆರೋಪವಿದೆ. ಕ್ರಿಮಿನಲ್ಗಳು, ಭಯೋತ್ಪಾದಕರು ಹಾಗೂ ದೇಶದ್ರೋಹಿ ಚಟುವಟಿಕೆ ನಡೆಸುವವರ ಮೇಲೆ ನಿಗಾ ಇಡಲು ಫೋನ್ ಕರೆ ಕದ್ದಾಲಿಕೆ ಮಾಡಲಾಗುತ್ತದೆ. ಕುಮಾರಸ್ವಾಮಿ ಅವರು ಹೇಳುವಂತೆ ನಮ್ಮ ಸರ್ಕಾರ ಯಾರೊಬ್ಬರ ಫೋನ್ ಕರೆಯನ್ನೂ ಕದ್ದಾಲಿಸುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.