ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ | ನಮ್ಮವರು ಬಿಜೆಪಿಗಿಂತಲೂ ಮುಂದಿದ್ದಾರೆ: ರೆಡ್ಡಿ

ಅಯೋಧ್ಯೆಗೆ ಆಯ್ಕೆಯಾಗಿದ್ದ ರಾಮನ ವಿಗ್ರಹಕ್ಕಾಗಿ ಟ್ರಸ್ಟ್‌ಗೆ ಪತ್ರ ಬರೆಯುವೆ ಎಂದ ಹುಸೇನ್
Published 26 ಜನವರಿ 2024, 15:46 IST
Last Updated 26 ಜನವರಿ 2024, 15:46 IST
ಅಕ್ಷರ ಗಾತ್ರ

ರಾಮನಗರ: ‘ಬಿಜೆಪಿಯವರದ್ದು ಅಯೋಧ್ಯೆ ರಾಮನಾದರೆ, ನಮ್ಮ ಸ್ಥಳೀಯ ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರದ್ದು ರಾಮನಗರದ ರಾಮ. ಅವರು ಅಲ್ಲಿ ರಾಮಮಂದಿರ ನಿರ್ಮಿಸಿದರೆ, ನಮ್ಮವರು ಇಲ್ಲೊಂದು ಮಂದಿರ ನಿರ್ಮಿಸಲು ಕಂಕಣಬದ್ಧರಾಗಿದ್ದಾರೆ. ಈ ವಿಷಯದಲ್ಲಿ ನಮ್ಮವರು ಬಿಜೆಪಿಗಿಂತಲೂ ಒಂದು ಹೆಜ್ಜೆ ಮುಂದಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಕುರಿತು ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನೂರಾರು ವರ್ಷಗಳಿಂದ ನಾವು ರಾಮನನ್ನು ಪೂಜೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಮನ ಹೆಸರಿನಲ್ಲಿ 45 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬರುತ್ತಿದ್ದಾರೆ’ ಎಂದು ಕಿಡಿ ಕಾರಿದರು.

‘ಧರ್ಮ ಮತ್ತು ದೇವರನ್ನು ನಾವು ರಾಜಕೀಯಕ್ಕೆ ತರುವುದಿಲ್ಲ. ಆದರೆ, ಬಿಜೆಪಿಯವರು ರಾಜಕೀಯಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ನಮಗೂ, ಅವರಿಗೂ ಇರುವುದು ಇದೇ ವ್ಯತ್ಯಾಸ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT