ಬುಧವಾರ, ಜುಲೈ 28, 2021
21 °C

ರಾಮನಗರ: 65ರ ವೃದ್ಧೆಗೆ ಸೋಂಕು, ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ಜಿಲ್ಲೆಯಲ್ಲಿ ಭಾನುವಾರ ಮತ್ತೊಂದು ಕೋವಿಡ್-19 ಪ್ರಕರಣ ವರದಿಯಾಗಿದ್ದು, ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಸೋಂಕಿತೆ ಚನ್ನಪಟ್ಟಣ ತಾಲ್ಲೂಕಿನ ಬಾಣಂತಹಳ್ಳಿ ಗ್ರಾಮದವರು.

ಚನ್ನಪಟ್ಟಣ ತಾಲೂಕಿನ ವೈ.ಟಿ. ಹಳ್ಳಿಯವರಾದ ಮಹಿಳೆ ಅನಾರೋಗ್ಯದ ಕಾರಣಕ್ಕೆ 10 ದಿನಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಸೋಂಕು ತಗುಲಿರಬಹುದು ಎಂದು  ಶಂಕಿಸಲಾಗಿದೆ. ಸದ್ಯ ಅದೇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು