ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಸ್ಥಿತಿಗತಿ ಅಧ್ಯಯನಕ್ಕೆ ತಜ್ಞರ ಸಮಿತಿ: ಡಿಕೆಶಿ

Last Updated 4 ಏಪ್ರಿಲ್ 2020, 10:15 IST
ಅಕ್ಷರ ಗಾತ್ರ

ಆರ್ಥಿಕ ಸ್ಥಿತಿಗತಿ ಅಧ್ಯಯನಕ್ಕೆ ತಜ್ಞರ ಸಮಿತಿ: ಡಿಕೆಶಿ

ರಾಮನಗರ: ಲಾಕ್ ಡೌನ್ ನಿಂದಾಗಿ‌ ರಾಜ್ಯದಲ್ಲಿ‌ ಉಂಟಾಗಿರುವ ಆರ್ಥಿಕ ಸ್ಥಿತಿಗತಿಯ ಅಧ್ಯಯನಕ್ಕೆ ಕೆಪಿಸಿಸಿಯು ಶಾಸಕ ಆರ್.ವಿ.‌ದೇಶಪಾಂಡೆ ನೇತೃತ್ವದಲ್ಲಿ ಅಧ್ಯಯನ ಸಮಿತಿಯನ್ನು ರಚಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ತಿಳಿಸಿದರು.

ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗು ಸಾರ್ವಜನಿಕರಿಗೆ ಹಂಚಲು 17 ಸಾವಿರ ಲೀಟರ್ ಸ್ಯಾಟಿಟೈಸರ್ ಹಾಗೂ 2 ಲಕ್ಷ ಮಾಸ್ಕ್ ಅನ್ನು ಜಿಲ್ಲಾಧಿಕಾರಿಗೆ ಶನಿವಾರ ಹಸ್ತಾಂತರಿಸಿ ಅವರು ಮಾತನಾಡಿದರು.

ಸಮಿತಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿನ ಉದ್ಯಮಿಗಳನ್ನು ಮಾತನಾಡಿಸಿ ಅಧ್ಯಯನ ವರದಿ ನೀಡಲಿದೆ. ಇದನ್ನು ಸರ್ಕಾರಕ್ಕೆ ಸಲಹೆ ರೂಪದಲ್ಲಿ ನೀಡಲಾಗುವುದು. ಇದು ದೇಶದಲ್ಲೇ ಮೊದಲ ಪ್ರಯತ್ನ ಎಂದರು.

ಕ್ರಮ ಕೈಗೊಳ್ಳಿ: ವೈರಸ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆ ಯರು ಹಾಗೂ ಪೊಲೀಸರ ಮೇಲೆ ದಾಳಿ ನಡೆದಿರುವುದು ಖಂಡನೀಯ. ಅಂತಹವರ ಮೇಲೆ‌ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ. ಅದಕ್ಕೆ ಕಾಂಗ್ರೆಸ್ ಬೆಂಬಲವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT