ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶು ವೈದ್ಯರನ್ನು ಬಿಡುಗಡೆಗೊಳಿಸುವಂತೆ ಮನವಿ

Published 8 ಡಿಸೆಂಬರ್ 2023, 15:57 IST
Last Updated 8 ಡಿಸೆಂಬರ್ 2023, 15:57 IST
ಅಕ್ಷರ ಗಾತ್ರ

ಕನಕಪುರ: ಪಶು ಇಲಾಖೆಯ ವೈದ್ಯರು ಹಾಗೂ ನೌಕರರನ್ನು ಕೃಷಿ ಇಲಾಖೆಯ ಇತರೆ ಕೆಲಸ ಮಾಡಲು ನಿಯೋಜನೆ ಮಾಡಿರುವುದನ್ನು ವಿರೋಧಿಸಿ, ಸರ್ಕಾರವು ಕೂಡಲೇ ಅವರನ್ನು ಆ ಕೆಲಸದಿಂದ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ರಾಮನಗರ ಜಿಲ್ಲೆಯು ಹೈನುಗಾರಿಕೆ ಮತ್ತು ರೇಷ್ಮೆ ಕೃಷಿಗೆ ಹೆಸರುವಾಸಿಯಾಗಿದ್ದು ಶೇ 90 ರಷ್ಟು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ಜಿಲ್ಲೆಯಲ್ಲಿ ಹೈನುಗಾರಿಕೆ ಹೆಚ್ಚಿರುವುದರಿಂದ ರಾಸುಗಳ ಸಂಖ್ಯೆಯು ಹೆಚ್ಚಾಗಿದ್ದು ಪಶು ಇಲಾಖೆಗಳ ಕೆಲಸವು ಹೆಚ್ಚಿದೆ. ಆದರೆ ಪಶುವೈದ್ಯರನ್ನು ಕೃಷಿ ಇಲಾಖೆಯ ಕೆಲಸಕ್ಕೆ ನಿಯೋಜನೆ ಮಾಡಲಾಗಿದ್ದು, ರೈತರಿಗೆ ಈ ವೈದ್ಯರ ಸೇವೆ ಸಿಗುತ್ತಿಲ್ಲ ಎಂದರು.

ಜಾನುವಾರುಗಳಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿದ್ದು, ನಿರ್ವಹಣೆಯು ಹೆಚ್ಚಿನ ಜವಾಬ್ದಾರಿಯಾಗಿದೆ. ತಾಲ್ಲೂಕಿನಲ್ಲಿ ಈಗಾಗಲೆ ಪಶು ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯು ಇದೆ. ಇದರ ನಡುವೆಯೇ ಕೃಷಿ ಇಲಾಖೆಯ ಕೆಲಸಗಳಿಗೆ ಪಶುವೈದ್ಯರನ್ನು ನಿಯೋಜಿಸಿರುವುದು ಸರಿಯಾದ ಕ್ರಮವಲ್ಲ ಎಂದು ದೂರಿದರು.

ಜಿಲ್ಲಾಧಿಕಾರಿ ಅವರು,  ಕೂಡಲೇ ಪಶು ವೈದ್ಯರನ್ನು ಕೃಷಿ ಇಲಾಖೆ ನಿಯೋಜನೆಯಿಂದ ಕೈ ಬಿಡಬೇಕು. ಪಶು ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸುವಂತೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಬಳಿಕತಹಶೀಲ್ದಾರ್‌ ಡಾ.ಸ್ಮಿತಾ ರಾಮ್‌ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರಾದ ಕೂಗಿ ಗಿರಿಯಪ್ಪ, ಗಬ್ಬಾಡಿ ಕಾಡೇಗೌಡ, ಭಾಸ್ಕರ್, ವೀರೇಶ್, ಮಂಜುನಾಥ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT