ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಲೂರು: ಜಿಲ್ಲಾ ಮಟ್ಟದ ಸಭೆ

Published : 6 ಆಗಸ್ಟ್ 2024, 7:21 IST
Last Updated : 6 ಆಗಸ್ಟ್ 2024, 7:21 IST
ಫಾಲೋ ಮಾಡಿ
Comments

ಕುದೂರು: ಸೋಲೂರಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಕರ್ನಾಟಕ ಬಹುಜನ ಚಳುವಳಿ ಸಂಘಟನೆಯ ಜಿಲ್ಲಾ ಮಟ್ಟದ ಸಭೆ ನಡೆಯಿತು.

ಕರ್ನಾಟಕ ಬಹುಜನ ಚಳುವಳಿ ರಾಜ್ಯಾಧ್ಯಕ್ಷ ಕನಕೇನಹಳ್ಳಿ ಕೃಷ್ಣಪ್ಪ ಮಾತನಾಡಿ, ‘ನಮ್ಮ ಸಂಘಟನೆ ಯಾವುದೋ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವವರ ಪರವಾಗಿ ನಮ್ಮ ಸಂಘಟನೆ ಕೆಲಸ ಮಾಡುತ್ತಿದೆ. ನಾವು ಸಂಘಟಿತರಾಗಿ ಸರ್ಕಾರದಿಂದ ಬರುವ ಅನುದಾನಗಳ ಬಗ್ಗೆ ತಿಳಿದುಕೊಳ್ಳಬೇಕು. ನಾವು ವಿದ್ಯಾವಂತರಾದರೆ, ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬಹುದು. ಸ್ವಯಂ ಉದ್ಯೋಗ ಮಾಡಲು ಸರ್ಕಾರದ ಯೋಜನೆಗಳನ್ನು ಬಳಕೆ ಮಾಡಿಕೊಳ್ಳಬೇಕು’ ಎಂದರು.

ರಾಜ್ಯ ಕಾರ್ಯದರ್ಶಿ ಶಿವಶಂಕರ್ ಮಾತನಾಡಿ, ‘ನಮ್ಮಲ್ಲಿ ಸಂಘಟನೆ ಇಲ್ಲದೆ ಹಿಂದುಳಿಯುತ್ತಿದ್ದೇವೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ನಾವು ಸಂಘಟನೆಯ ಮೂಲಕ ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಎಸ್.ಸಿ/ ಎಸ್.ಟಿ ವರ್ಗಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷ ನರಸಾಪುರ ಕಿರಣ್ ಕುಮಾರ್, ಡಾ.ಕೃಷ್ಣ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫೈರೋಜ್ ಖಾನ್, ನೆಲಮಂಗಲ ಆಶ್ರಯ ಸಮಿತಿ ಸದಸ್ಯ ಮಂಜುನಾಥ್, ಹಕ್ಕಿನಾಳು ಕುಮಾರ್, ಸೋಮಶೇಖರ್, ಬಾಣವಾಡಿ ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮಣ್, ನವೀನ್ ಕುಮಾರ್, ಶರತ್, ಆದರ್ಶ, ಬಿಟ್ಟಸಂದ್ರ ನವೀನ್, ರಂಗರಾಜು, ಶ್ರೀನಿವಾಸ್, ಬಸವರಾಜು ಮುಂತಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT