ಸೋಮವಾರ, ಡಿಸೆಂಬರ್ 5, 2022
28 °C

ರಾಮನಗರ: ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ ಸರ್ಕಾರಿ ಡಿಪ್ಲೊಮಾ ಮತ್ತು ಪಾಲಿಟೆಕ್ನಿಕ್ ಕಾಲೇಜು ಬಳಿ ಬಸ್ ಗಳ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಸೋಮವಾರ ಇಲ್ಲಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಹಾಗೂ ಸಂಜೆ ಕಾಲೇಜು ಬಳಿ ಕೆಎಸ್ ಆರ್ ಟಿಸಿ ಬಸ್ ನಿಲುಗಡೆ‌ ಮಾಡುತ್ತಿಲ್ಲ. ಹೀಗಾಗಿ ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಲು ಆಗುತ್ತಿಲ್ಲ. ವಿದ್ಯಾರ್ಥಿಗಳು ನಿಲ್ಲಲು ಹೆದ್ದಾರಿಯಲ್ಲಿ ಬಸ್ ಶೆಲ್ಟರ್ ಸಹ ಇಲ್ಲ ಎಂದು ದೂರಿದರು.

ಈ ಹಿಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಸಂದರ್ಭ ಕೆಲ ತಿಂಗಳು ಬಸ್ ನಿಲುಗಡೆ ಮಾಡಿದ್ದರು. ಮತ್ತೆ ಹಳೇ ಪರಿಸ್ಥಿತಿಯೇ ಇದೆ. ಹೀಗಾಗಿ ಕಡ್ಡಾಯವಾಗಿ ಕೆಎಸ್ ಆರ್ ಟಿಸಿ ಬಸ್ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು