ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಳಾಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನಗದ್ದೆ ಭಸ್ಮ

Published 3 ಆಗಸ್ಟ್ 2023, 8:52 IST
Last Updated 3 ಆಗಸ್ಟ್ 2023, 8:52 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಅರಳಾಪುರ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಸಂಪೂರ್ಣ ಭಸ್ಮವಾಗಿದೆ.

ಗ್ರಾಮದ ರೈತ ನಾಗೇಂದ್ರಗೌಡ ಅವರ ಕಬ್ಬಿನಗದ್ದೆಗೆ ಬೆಂಕಿ ತಗುಲಿದ್ದು, ಗದ್ದೆಯ ಮಧ್ಯಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಒಂದಕ್ಕೊಂದು ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಸ್ಥಳೀಯರು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಕಬ್ಬಿನಗದ್ದೆಯಲ್ಲಿದ್ದ 35 ತೆಂಗಿನಮರಗಳು ಸುಟ್ಟು ಹೋಗಿವೆ. ಗದ್ದೆಗೆ ಹನಿ ನೀರಾವರಿಗಾಗಿ ಅಳವಡಿಸಿದ್ದ ಪೈಪ್‌ಗಳು ಸುಟ್ಟಿವೆ. ಘಟನೆಯಲ್ಲಿ ₹8 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT