ಬುಧವಾರ, ಜುಲೈ 28, 2021
23 °C

ಗಾಂಜಾ ಮಾರಾಟ: ಮೂರು ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, 114 ಗ್ರಾಂ ಗಾಂಜಾ ಇದ್ದ 15 ಪ್ಯಾಕೆಟ್ ಗಳನ್ನು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.

ರಾಮನಗರದ ಕುವೆಂಪುನಗರದ ಜಾವೀದ್ ಖಾನ್ (40), ಬಡಾಮಕಾನ್ ನ ಉಬೇದ್ (35), ಸೈಯದ್ ಸೊರ್ಪಾಲ್ (35) ಬಂಧಿತರು. ಈ ಮೂರು ಮಂದಿ ಆರೋಪಿಗಳು ಗಾಂಜಾ ಮಾರಾಟ ಮಾಡುವಾಗ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೃತ್ಯಕ್ಕೆ ಬಳಸುತ್ತಿದ್ದ ಮೂರು ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು