ರಾಮನಗರ: ಬೇಸಿಗೆಯ ಬಿಸಿಲ ಧಗೆ ಹೆಚ್ಚಿದಂತೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಬಿಗಡಾಯಿಸುತ್ತಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಲ ತಾಪಮಾನಕ್ಕೆ ಜಲಕ್ಷಾಮ ಭೀತಿ ಎದುರಾಗಿದೆ. ಜಿಲ್ಲೆಯ 42 ಗ್ರಾಮ ಪಂಚಾಯಿತಿಗಳ 85 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ.

ಬಿಸಿಲ ಹೊಡೆತಕ್ಕೆ ಜಿಲ್ಲೆಯ ಬಹುತೇಕ ಕೆರೆ–ಕಟ್ಟೆ, ನದಿ–ತೊರೆಗಳಲ್ಲಿ ನೀರು ಬತ್ತಿ ಹೋಗಿದೆ. ಜನರಿಗಷ್ಟೇ ಅಲ್ಲದೆ ಪ್ರಾಣಿಗಳಿಗೂ ಸಹ ಕುಡಿಯುವ ನೀರಿನ ಅಭಾವ ತಲೆದೋರಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತವು ಗ್ರಾಮ ಪಂಚಾಯಿತಿಗಳ ಮೂಲಕ ಖಾಸಗಿ ಟ್ಯಾಂಕರ್ ಮತ್ತು ಕೊಳವೆಬಾವಿಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಂಡಿದೆ.

ಹೆಚ್ಚಿದ ಧಗೆಯಿಂದಾಗಿ ಏಪ್ರಿಲ್ ತಿಂಗಳಾರಂಭದಲ್ಲೇ ಜಿಲ್ಲೆಯ 52 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಇದೀಗ ಅದು ಮತ್ತಷ್ಟು ಗ್ರಾಮಗಳಿಗೆ ವಿಸ್ತರಿಸಿದೆ. ನೀರಿಲ್ಲದೆ ಬೆಳೆಗಳೂ ಒಣಗತೊಡಗಿವೆ. ಇದುವರೆಗೆ ಕಳೆದೊಂದು ವಾರದಲ್ಲಿ ಮಾತ್ರ ಎರಡು ಸಲ ಮಳೆ ಬಂದು ಹೋಗಿದೆ.

ಮಾಗಡಿಯಲ್ಲಿ ಹೆಚ್ಚು: ಜಿಲ್ಲೆಯ ರಾಗಿ ಕಣಜವಾಗಿರುವ ಮಾಗಡಿ ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಇಲ್ಲಿನ 29 ಗ್ರಾಮಗಳಲ್ಲಿ ನೀರಿನ ಕೊರತೆ ಇದೆ. ಉಳಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ಷೇತ್ರವಾದ ಕನಕಪುರದಲ್ಲಿ 25, ರಾಮನಗರದಲ್ಲಿ 15, ಹಾರೋಹಳ್ಳಿಯಲ್ಲಿ 10 ಹಾಗೂ ಚನ್ನಪಟ್ಟಣದಲ್ಲಿ 5 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ.

‘ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉದ್ಭವವಾಗಿರುವ ಗ್ರಾಮಗಳನ್ನು ಗುರುತಿಸಿ, ಅಲ್ಲಿ ನೀರು ಸರಬರಾಜು ಮಾಡಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಕೆ. ಜ್ಞಾನಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

ನಗರ–ಪಟ್ಟಣ ಸೇಫ್: ನಗರ ಮತ್ತು ಪಟ್ಟಣಗಳಿಗೆ ಹೋಲಿಸಿದರೆ ಗ್ರಾಮಗಳಲ್ಲೇ ನೀರಿಗೆ ಬರ ಉಂಟಾಗಿದೆ. ಚನ್ನಪಟ್ಟಣ ಮತ್ತು ಜಿಲ್ಲಾ ಕೇಂದ್ರವಾದ ರಾಮನಗರಕ್ಕೆ ದಿನದ 24 ಗಂಟೆ ನೀರು ಪೂರೈಸುವ ನೆಟ್ಕಲ್ ಯೋಜನೆ ಪೂರ್ಣಗೊಂಡಿದ್ದು, ಈಗಾಗಲೇ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸಿ ನೀರು ಪೂರೈಕೆ ಮಾಡಲಾಗುತ್ತಿದೆ.

ನಗರ ಯಾವುದಾದರು ವಾರ್ಡ್ಗಳಲ್ಲಿ ನೀರಿನ ಕೊರತೆ ಇದ್ದರೆ, ಕೂಡಲೇ ಅಲ್ಲಿಗೆ ಟ್ಯಾಂಕರ್ನಲ್ಲಿ ನೀರು ಪೂರೈಕೆ ಮಾಡಲು ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ. ಹಾಗಾಗಿ ಜಿಲ್ಲಾ ಕೇಂದ್ರವಾದ ರಾಮನಗರ, ತಾಲ್ಲೂಕು ಕೇಂದ್ರಗಳಾದ ಕನಕಪುರ, ಚನ್ನಪಟ್ಟಣ, ಮಾಗಡಿ ಹಾಗೂ ಹಾರೋಹಳ್ಳಿಯಲ್ಲಿ ಹೇಳಿಕೊಳ್ಳುವಂತಹ ನೀರಿನ ಸಮಸ್ಯೆ ಇಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-14-109015106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.