ಮಂಗಳವಾರ, ಜೂನ್ 28, 2022
23 °C

ರಾಮನಗರ: ಲಂಚ ಪಡೆಯುತ್ತಿದ್ದ ಸಹಾಯಕ ನಿಬಂಧಕ ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರಾಗಿ ನೇಮಿಸಲು ₹90 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಸಹಕಾರ ಸಂಘಗಳ ಸಹಾಯಕ ನಿಬಂಧಕ ವೆಂಕಟೇಶ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಹಾಲು ಉತ್ಪಾದಕರ ಸಂಘದ ಸಿಇಒ ಹುದ್ದೆಗೆ ಜಯಚಂದ್ರ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಹುದ್ದೆಗೆ ನೇಮಕ ಮಾಡಲು ₹1 ಲಕ್ಷ ಲಂಚಕ್ಕೆ ವೆಂಕಟೇಶ್‌ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಅರ್ಜಿದಾರರು ಈ ಮೊದಲೇ ₹10 ಸಾವಿರ ಹಣ ನೀಡಿದ್ದು, ಈ ಸಂಬಂಧ ಎಸಿಬಿಗೆ ದೂರು ಸಲ್ಲಿಸಿದ್ದರು.

ಎಸಿಬಿ ಅಧಿಕಾರಿಗಳ ಸೂಚನೆ ಮೇರೆಗೆ ಅರ್ಜಿದಾರರು ಸೋಮವಾರ ಉಳಿದ ₹90 ಸಾವಿರ ಲಂಚ ನೀಡುತ್ತಿದ್ದ ವೇಳೆ ಡಿವೈಎಸ್ಪಿ ಶಂಕರ್ ಜೋಗಿನ್ ನೇತೃತ್ವದ ತಂಡವು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು