ರಾಮನಗರ: ‘ವಿಚಿತ್ರ ಪರಿಸ್ಥಿತಿಯಲ್ಲಿರುವ ಸಮಾಜವು ಇಂದು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಸವಣ್ಣನ ಅಮಲಿನ ಬದಲು, ಅವರ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು. ಆಗ ಮಾತ್ರ, ಅವರಿಬ್ಬರ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ’ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಇಲ್ಲಿನ ನಗರಸಭೆಯು ಶುಕ್ರವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಅವರು, ‘ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರ ಚಿತ್ರ ಇಟ್ಟುಕೊಂಡು ಜಾತಿ ರಾಜಕಾರಣ ಮಾಡಲಾಗುತ್ತಿದೆ. ಈ ದಾರ್ಶನಿಕರು ಜಾತಿಗೆ ಸೀಮಿತವಾದವರಲ್ಲ. ಅದನ್ನು ಮೀರಿ ಮಾನವಾಭ್ಯುದಯಕ್ಕೆ ಶ್ರಮಿಸಿದವರು’ ಎಂದರು.

‘ಇಬ್ಬರೂ ಮಹನೀಯರು ಕೊಟ್ಟ ಸಂದೇಶಗಳು ಸಾರ್ವಕಾಲಿಕ. ವಚನಗಳು ನಮ್ಮ ಬದುಕಿಗೆ ನೈತಿಕ ಚೌಕಟ್ಟನ್ನು, ಸಂವಿಧಾನವು ಕಾನೂನು ಚೌಕಟ್ಟನ್ನು ಒದಗಿಸುತ್ತದೆ. ಇವೆರಡನ್ನೂ ಒಳಗೊಂಡ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಕಲ್ಯಾಣ ರಾಜ್ಯದ ಕನಸು ನನಸಾಗುತ್ತದೆ. ವಚನಕಾರರ ಜಾತ್ಯತೀತತೆ ಹಾಗೂ ಬಹುತ್ವದ ತತ್ವಗಳು ನಮ್ಮ ಸಂವಿಧಾನದಲ್ಲಿವೆ’ ಎಂದು ಹೇಳಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ‘ಪ್ರಜಾಪ್ರಭುತ್ವದ ಆತ್ಮವಾದ ಸಂಸತ್ತನ್ನು 800 ವರ್ಷಗಳ ಹಿಂದೆಯೇ ಬಸವಣ್ಣನವರು ಅನುಭವ ಮಂಟಪ ಕಟ್ಟಿ ಸಾಕಾರಗೊಳಿಸಿದರು. ನಗರಸಭೆಯು ಬಸವಣ್ಣನವರ ಆಶಯದಂತೆ ಬಡವರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲರ ಕಲ್ಯಾಣದ ಬದ್ದತೆಯೊಂದಿಗೆ ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ’ ಎಂದು ತಿಳಿಸಿದರು.

ಸ್ವಾಮೀಜಿಗಳ ಸಾನ್ನಿಧ್ಯ: ಕಾರ್ಯಕ್ರಮದಲ್ಲಿ ಕನಕಪುರದ ದೇಗುಲ ಮಠದ ಡಾ. ಮುಮ್ಮಡಿ ನಿರ್ವಾಣ ಸ್ವಾಮೀಜಿ, ಮರಳೇಗವಿಮಠದ ಶಿವರುದ್ರ ಸ್ವಾಮೀಜಿ, ದೊಡ್ಡ ಮರಳವಾಡಿ ಮಠದ ಮೃತ್ಯುಂಜಯ ಸ್ವಾಮೀಜಿ, ಕೇತೋಹಳ್ಳಿಯ ಸಿದ್ದಲಿಂಗ ಸ್ವಾಮೀಜಿ, ಬಿಡದಿ ಚೌಕಿ ಮಠದ ಹುಚ್ಚಪ್ಪ ಸ್ವಾಮೀಜಿ, ಚನ್ನಪಟ್ಟಣ ವಿರಕ್ತ ಮಠದ ಶಿವರುದ್ರ ಸ್ವಾಮೀಜಿ, ಬೇವೂರು ಮಠದ ಮೃತ್ಯುಂಜಯ ಸ್ವಾಮೀಜಿ, ರೇವಣಸಿದ್ದೇಶ್ವರ ಬೆಟ್ಟದ ಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದರು.

ಮಾಜಿ ಶಾಸಕ ಸಿ.ಎಂ. ಲಿಂಗಪ್ಪ, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಬಮೂಲ್ ನಿರ್ದೇಶಕ ಪಿ. ನಾಗರಾಜ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಎಚ್. ಮಂಜು, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಸ್. ಯೋಗಾನಂದ್, ತಾಲ್ಲೂಕು ಅಧ್ಯಕ್ಷ ಪೋಲೀಸ್ ಶಂಕರಪ್ಪ, ವೀರಶೈವ ಸಂಘದ ತಾಲ್ಲೂಕಾಧ್ಯಕ್ಷ ಎಂ.ಆರ್. ಶಿವಕುಮಾರ ಸ್ವಾಮಿ, ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿಭೂತಿಕೆರೆ ಶಿವಲಿಂಗಯ್ಯ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಎಚ್. ರಾಜು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ ಗುರುವೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಮಹಮದ್ ಆರೀಫ್, ಸದಸ್ಯರು ಹಾಗೂ ಇತರರು ಇದ್ದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಗೈರಾಗಿದ್ದರು. ದಿವ್ಯ ಆಲೂರು ನಿರೂಪಣೆ ಮಾಡಿದರು. ನಗರಸಭೆಯ ಕಂದಾಯ ನಿರೀಕ್ಷಕ ಆರ್. ನಾಗರಾಜು ಗಣ್ಯರನ್ನು ಸ್ವಾಗತಿಸಿದರು. ಪೌರಾಯುಕ್ತ ಡಾ. ಜಯಣ್ಣ ವಂದನಾರ್ಪಣೆ ಮಾಡಿದರು. ಬ್ಯಾಡರಹಳ್ಳಿ ಶಿವಕುಮಾರ್ ಅವರ ತಂಡ ಗೀತ ಗಾಯನ ಪ್ರಸ್ತುತಪಡಿಸಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-1936416966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.